ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೆ.ಎಚ್. ಮುನಿಯಪ್ಪ ಬೆಂಬಲಿಗರ ಮೇಲೆ ಶಾಸಕ ಕೊತ್ತೂರು ಬೆಂಬಲಿಗರಿಂದ ಹಲ್ಲೆ

ಕಾಂಗ್ರೆಸ್ ಕಚೇರಿಯಲ್ಲಿ ಮತ್ತೆ ಬಣಗಳ ಕಿತ್ತಾಟ
Published 13 ಫೆಬ್ರುವರಿ 2024, 8:25 IST
Last Updated 13 ಫೆಬ್ರುವರಿ 2024, 8:25 IST
ಅಕ್ಷರ ಗಾತ್ರ

ಕೋಲಾರ: ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಕೆ.ಎಚ್. ಮುನಿಯಪ್ಪ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರ ನಡುವೆ ಹೊಡೆದಾಟ ನಡೆದಿದೆ.

ಮುನಿಯಪ್ಪ ಬೆಂಬಲಿಗ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಧಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಕೊತ್ತೂರು ಬೆಂಬಲಿಗರು ಹಾಗೂ ನಗರಸಭೆ ಸದಸ್ಯರಾದ ಅಂಬರೀಶ್, ಅಪ್ಸರ್,‌ ಶಿವಕುಮಾರ್ ಮೇಲೆ ಹಲ್ಲೆ ನಡೆಸಿದರು.

ಫ್ಲೆಕ್ಸ್‌ನಲ್ಲಿ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಭಾವಚಿತ್ರ ಇಲ್ಲ ಎಂಬ ಕಾರಣಕ್ಕೆ ಈ ಜಗಳ ನಡೆದಿದೆ.

ಅಲ್ಲದೇ, ಬೇರೆ ಪಕ್ಷದಲ್ಲಿ ಗುರುತಿಸಿಕೊಂಡವರನ್ನು ವೇದಿಕೆ ಮೇಲೆ ಕೂರಿಸಿದ್ದಾರೆ ಎಂದು ಕೆಲವರು ಆಕ್ಷೇಪ ‌ವ್ಯಕ್ತಪಡಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ‌ಪಿ.ಆರ್.ರಮೇಶ್ ಹಾಗೂ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಸಮ್ಮುಖದಲ್ಲಿ ಈ ಘಟನೆ ನಡೆದಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT