ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ ನಗರಸಭೆ: ಅಧ್ಯಕ್ಷೆ, ಉಪಾಧ್ಯಕ್ಷೆ ಅಧಿಕಾರ ಸ್ವೀಕಾರ

Published : 28 ಆಗಸ್ಟ್ 2024, 15:19 IST
Last Updated : 28 ಆಗಸ್ಟ್ 2024, 15:19 IST
ಫಾಲೋ ಮಾಡಿ
Comments

ಕೋಲಾರ: ಕೋಲಾರ ನಗರಸಭೆಯ ನೂತನ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಬುಧವಾರ ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ‘ನಗರಸಭೆಯಲ್ಲಿ ಪರಿಸ್ಥಿತಿ ಸರಿಪಡಿಸಬೇಕು ಎಂಬ ಉದ್ದೇಶದಿಂದ ಒಳ್ಳೆಯವರನ್ನು ಅಧ್ಯಕ್ಷ-ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ. ಇನ್ನು ಮುಂದೆ ಹಂತಹಂತವಾಗಿ ನಗರದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಏನೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮಾರ್ಗದರ್ಶನ ನೀಡಲಾಗುವುದು’ ಎಂದರು.

‘ನಗರದಲ್ಲಿನ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್‍ಗಳಲ್ಲಿ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡುವಂತೆ ಸಲಹೆ ನೀಡಲಾಗಿದೆ’ ಎಂದು ಹೇಳಿದರು.

‘ಅಧಿಕಾರ ವಹಿಸಿಕೊಂಡಿರುವವರೇ ಆಡಳಿತ ನಡೆಸುತ್ತಾರೆ ಹೊರತು ಬೇರೆ ಯಾರೂ ನಡೆಸುವುದಿಲ್ಲ. ನಾವು, ಅವರ ಪತಿ ಸೇರಿದಂತೆ ಎಲ್ಲರೂ ಮಾರ್ಗದರ್ಶನ, ಸಲಹೆ ನೀಡಬಹುದೇ ಹೊರತು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ’ ಎಂದು ಹೇಳಿದರು.

ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮ ಕೈಗೊಳ್ಳುತ್ತೇವೆ. ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. 2-3 ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT