ಕೋಲಾರ: ಜಿಲ್ಲೆಯಲ್ಲಿ ಕನ್ನಡ ಭಾಷೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ವಾಣಿಜ್ಯ ಮಳಿಗೆಗಳು, ಬ್ಯಾಂಕ್ಗಳು ಹಾಗೂ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಆರ್.ರವಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಸಭೆಗಳಲ್ಲಿ ನೀಡಿದ ಸೂಚನೆಗಳ ಹೊರತಾಗಿಯೂ ಕನ್ನಡ ಅನುಷ್ಠಾನ ನೂರಕ್ಕೆ ನೂರರಷ್ಟು ಆಗುತ್ತಿಲ್ಲ ಎಂದು ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಎಲ್ಲಾ ಅಂಗಡಿ, ಮಳಿಗೆ ಹಾಗೂ ವಾಣಿಜ್ಯ ಸಂಕೀರ್ಣಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಬೇಕು. ನಿಯಮ ಉಲ್ಲಂಘಿಸುವ ಉದ್ದಿಮೆಗಳಿಗೆ ಮೊದಲು ಎಚ್ಚರಿಕೆ ನೋಟಿಸ್ ನೀಡಬೇಕು. ನೋಟಿಸ್ ನೀಡಿದ ಮೇಲೂ ನಾಮಫಲಕ ಬದಲಿಸದಿದ್ದರೆ ಅಂತಹ ಉದ್ದಿಮೆಗಳ ವಾಣಿಜ್ಯ ಪರವಾನಗಿ ರದ್ದುಪಡಿಸುವಂತೆ ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆದ್ದಾರಿ ಬದಿಯ ಜಾಹೀರಾತು ಫಲಕಗಳು ಮತ್ತು ಕೆಲ ಕಾಲೇಜು ಸೇರಿದಂತೆ ವಿವಿಧೆಡೆ ಕೇವಲ ಇಂಗ್ಲಿಷ್ ನಾಮಫಲಕ ಇರುವುದನ್ನು ಗಮನಿಸಿದ್ದು, ತಕ್ಷಣ ಅವುಗಳನ್ನು ತೆರವುಗೊಳಿಸಿ ಕನ್ನಡ ಅಳವಡಿಸಲು ಕ್ರಮವಹಿಸುವಂತೆ ಸೂಚಿಸಿದರು.

ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ 'ಸರೋಜಿನಿ ಮಹಿಷಿ ವರದಿ'ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಸಿ ಮತ್ತು ಡಿ ವೃಂದದ ಹುದ್ದೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆಯೇ ಎಂಬುದರ ಬಗ್ಗೆ ತ್ರೈಮಾಸಿಕ ವರದಿ ಪಡೆಯುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಖಾನೆಗಳ ಆವರಣದಲ್ಲಿ ಮತ್ತು ಕಾರ್ಮಿಕರ ಸಂಪರ್ಕದ ಸೂಚನಾ ಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು ಎಂದು ತಾಕೀತು ಮಾಡಿದರು.

ಉರ್ದು ಶಾಲೆಗಳ ಮಕ್ಕಳಿಗೆ ಕನ್ನಡ ಶಿಕ್ಷಕರನ್ನು ನೇಮಿಸಿದ್ದು, ಅವರಿಗೆ ಕಡ್ಡಾಯವಾಗಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದು ಅವಶ್ಯವಾಗಿದೆ. ಈ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಕೈಗಾರಿಕೆಗಳ ಇಲಾಖೆ ಉಪನಿರ್ದೇಶಕ ರಫೀಕ್, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ಅಂಬಿಕಾ, ಕನ್ನಡ ಮತ್ತುಸಮಿತಿಯ ಸದಸ್ಯರಾದ ಬಾಹ ಶೇಖರಪ್ಪ, ಮಂಜುನಾಥ್, ನೇತ್ರಾವತಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-18-1402797134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.