ಕೋಲಾರ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–75ರ ಮಡೇರಹಳ್ಳಿ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಎರಡು ಈಚರ್, ಮೂರು ಕಾರುಗಳು ಹಾಗೂ ಒಂದು ಬೈಕ್ ಜಖಂಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ನಡೆದಿದೆ.

ಈಚರ್ ವಾಹನವೊಂದು ಮೊದಲು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ನಂತರ ಅದರ ಹಿಂದೆ ವೇಗವಾಗಿ ಬರುತ್ತಿದ್ದ ಮತ್ತೊಂದು ಈಚರ್ ವಾಹನ, ಮೂರು ಕಾರು, ಒಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಸರಣಿ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ಬಾಲಕನ ತಲೆಗೆ ಪೆಟ್ಟಾಗಿದೆ.

ಬೆಂಗಳೂರಿನಿಂದ ಕೋಲಾರಕ್ಕೆ ತೆರಳುತ್ತಿದ್ದ ಈಚರ್ ವಾಹನ ಇದೇ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ಇಟ್ಟಿದ್ದ ಮಡಿಕೆಗಳಿಗೆ ಡಿಕ್ಕಿ ಹೊಡೆದಿದ್ದು, ಕಾಲುವೆಗೆ ಜಾರಿ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಷಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಅಪಘಾತದಿಂದಾಗಿ ಕೆಲ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು. ಪೊಲೀಸರು ಸ್ಥಳಕ್ಕೆ ಬಂದು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-18-1576946605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.