ಕೋಲಾರ: ನೂತನ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಇಲ್ಲಿ ಭಾನುವಾರ ಜಿಲ್ಲಾಡಳಿತ ಭವನದಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಸೆಲ್ವಮಣಿ ಅವರಿಗೆ ಕಾರ್ಯಾಭಾರ ಹಸ್ತಾಂತರಿಸಿ ಶುಭ ಕೋರಿದರು.

ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿ ಸೆಲ್ವಮಣಿ, ‘ಜಿಲ್ಲೆಯ ಜಲ ಮೂಲಗಳ ಪುನಶ್ವೇತನ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೋಲಾರದಂತಹ ಉತ್ತಮ ಜಿಲ್ಲೆಯಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಸಂತಸವಾಗಿದೆ’ ಎಂದರು.

‘ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ ಎಂಬುದು ಗೊತ್ತಿದೆ. ಸಮಸ್ಯೆ ನಿವಾರಣೆಗೆ ಆದ್ಯತೆ ನೀಡುತ್ತೇನೆ. ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಕೆರೆಗಳಿದ್ದು, ಜಲ ಮೂಲಗಳ ಪುನಶ್ಚೇತನಕ್ಕೆ ಒತ್ತು ಕೊಡುತ್ತೇನೆ. ಜಿಲ್ಲೆಯ ಸಮಸ್ಯೆ ತಿಳಿದು ಜನರ ಕಷ್ಟಕ್ಕೆ ಸ್ಪಂದಿಸುತ್ತೇನೆ. ಅಭಿವೃದ್ಧಿ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ಜಿಲ್ಲಾಧಿಕಾರಿ ಕಚೇರಿಯ ನೌಕರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.