ಪ್ರಜಾವಾಣಿ ವಾರ್ತೆ

ಕೋಲಾರ: ನಗರದ ಹೊರವಲಯಯದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಗ್ರಾಮಾಂತರ ಠಾಣೆ ಪೊಲೀಸರು, ₹2 ಲಕ್ಷ ಬೆಲೆಯ 4 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕೋಲಾರದ ಷಹಿಂಷಾ ನಗರದ ಮುಬಾರಕ್ ಪಾಷ (40) ಬಂಧಿತ ಆರೋಪಿ. ಕೋಲಾರ-ವೇಮಗಲ್ ರಸ್ತೆಯ ಸಂಗೊಂಡಹಳ್ಳಿ ಗ್ರಾಮದ ಸಮೀಪ ಇರುವ ಖಂಡಿ ಗಣಪತಿ ದೇವಾಲಯ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆಟೋದಲ್ಲಿ ಕುಳಿತು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಸಿಬ್ಬಂದಿ ಶೇಕ್ ಸಾಧಿಕ್ ಪಾಷ, ರವಿಕುಮಾರ್, ಮುರಳಿ ಮೋಹನ್, ಆಂಜಿನಪ್ಪ, ಸತೀಶ್, ನವೀನ್ ಕುಮಾರ್, ಆರತಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಗಾಂಜಾ, ಒಂದು ಡಿಜಿಟಲ್ ತೂಕದ ಯಂತ್ರ ಹಾಗೂ ಆಟೋವನ್ನು ವಶಕ್ಕೆ ಪಡೆದಿದ್ದಾರೆ.

ಸಿಬ್ಬಂದಿ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಎಎಸ್ಪಿಗಳಾದ ರವಿಶಂಕರ್, ಜಗದೀಶ್, ಡಿವೈಎಸ್ಪಿ ಎಂ.ಎಚ್.ನಾಗ್ತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.