ಕೋಲಾರ: ನಗರದ ಜಾಲಪ್ಪ ಶಿಕ್ಷಣ ಸಂಸ್ಥೆಯ ಬೆಳ್ಳಿ ಭವನದ ಸಭಾಂಗಣದಲ್ಲಿ ಮಂಗಳವಾರ ಟಿಎನ್ಎ ಹಾಗೂ ದೇವರಾಜ ಅರಸು ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ, ಸಾಂಸ್ಕೃತಿಕ ಶೌರ್ಯ ಮತ್ತು ಜೋಷ್ ಸ್ಪರ್ಧೆಗೆ ಚಾಲನೆ ಲಭಿಸಿತು.

ರಾಜ್ಯದ ವಿವಿಧ ನರ್ಸಿಂಗ್ ಕಾಲೇಜುಗಳು ಹಾಗೂ ಆಸ್ಪತ್ರೆಗಳಿಂದ ಆಗಮಿಸಿದ್ದ ತಂಡಗಳು ಭಾಗವಹಿಸಿವೆ. ಬುಧವಾರ ಕೋಲಾರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ನರ್ಸ್ಗಳ ಕ್ರೀಡಾಕೂಟ ನಡೆಯಲಿದೆ.

ಅಖಿಲ ಭಾರತ ತರಬೇತು ಪಡೆದ ನರ್ಸ್ಗಳ ಸಂಘದ ರಾಜ್ಯ ಶಾಖೆಯ ಉಪಾಧ್ಯಕ್ಷೆ ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಉದ್ಘಾಟಿಸಿದರು.

ಸಂಘದಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಇಲ್ಲಿ ಗೆದ್ದವರು ಪುಣೆಯಲ್ಲಿ ನವೆಂಬರ್ನಲ್ಲಿ ನಡೆಯುವ ರಾಷ್ಟ್ರೀಯ ನರ್ಸ್ಗಳ ಕ್ರೀಡಾ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲು ಅವಕಾಶ ಪಡೆಯುತ್ತಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ದೇವರಾಜ ಅರಸು ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ‘ಸಂಸ್ಥೆಯು ಕಲಿಕೆ ಮತ್ತು ಸೇವೆಗೆ ಆದ್ಯತೆ ನೀಡುತ್ತಿದೆ. 1500 ಹಾಸಿಗೆಗಳ ಆಸ್ಪತ್ರೆಯು ನರ್ಸ್ಗಳ ಕಲಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸಿದೆ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನದಲ್ಲಿ ಯೋಗ, ಆಯುರ್ವೇದ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ’ ಎಂದರು.

ಸಂಸ್ಧೆಯ ಕುಲಪತಿ ಡಾ.ಬಿ.ವೆಂಗಮ್ಮ, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಿವಿಎಲ್ಎನ್ ಪ್ರಸಾದ್, ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ರಿಜಿಸ್ಟ್ರಾರ್ ಡಾ.ಸಿ.ಮುನಿನಾರಾಯಣ, ರಾಜ್ಯ ನರ್ಸ್ಗಳ ಸಂಘದ ಸಲಹೆಗಾರ್ತಿ ಡಾ.ಎಲ್.ದಬಾಷಿಣಿ ದೇವಿ, ಅರಸು ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ವಿಜಯಲಕ್ಷ್ಮಿ, ಉಪ ಪ್ರಾಂಶುಪಾಲೆ ಲಾವಣ್ಯ ಸುಭಾಷಿನಿ, ಜೈರಾಕಿನಿ ಅರುಣ, ವೀಣಾ, ರಮ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.