ಬೆಂಗಳೂರು: ‘ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದ ರಾಜಕಾಲುವೆ ವ್ಯಾಪ್ತಿಯಲ್ಲಿ ‘ಭಾರತ್ ಪೆಟ್ರೋಲ್ ಬಂಕ್’ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ’ ಎಂದು ಆಕ್ಷೇಪಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ಜಿಲ್ಲಾಧಿಕಾರಿಯ ಕ್ರಮವನ್ನು ಆಕ್ಷೇಪಿಸಿ ಮುಳಬಾಗಿಲು ತಾಲ್ಲೂಕಿನ ಸೂರಕುಂಟೆಯ ಎಸ್.ನಿತಿನ್ ಸಲ್ಲಿಸಿರುವ ಅರ್ಜಿಯನ್ನು ಎಚ್.ಪಿ.ಸಂದೇಶ್ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎನ್.ಶಿವಕುಮಾರ್, ‘ನಂಗಲಿ ಗ್ರಾಮದ ಸರ್ವೆ ನಂಬರ್ 378, 382, ಮತ್ತು 515-528ರಲ್ಲಿ ರಾಜಕಾಲುವೆ ಹಾದು ಹೋಗುತ್ತದೆ. ಈ ಜಾಗವನ್ನು ರಾಷ್ಟ್ರೀಯ ಹೆದ್ದಾರಿ- 755ರ ನಿರ್ಮಾಣ ಹಾಗೂ ಅಗಲೀಕರಣಕ್ಕಾಗಿ ನೀಡಲಾಗಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಆದರೆ, ಈ ಅರ್ಜಿ ಹೈಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ ರಾಜಕಾಲುವೆಗೆ ಸೇರಿದ ಜಾಗದಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ನ ಪೆಟ್ರೋಲ್ ಬಂಕ್ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿ ನಿರಾಕ್ಷೇಪಣಾ ಪತ್ರ ನೀಡಿದ್ದಾರೆ’ ಎಂದರು.

‘ನಿರಾಕ್ಷೇಪಣಾ ಪತ್ರವು ಹೈಕೋರ್ಟ್ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಬಂಕ್ ನಿರ್ಮಾಣವಾದರೆ ರಾಜಕಾಲುವೆಗೆ ಜಾಗವೇ ಇಲ್ಲದಂತಾಗುತ್ತದೆ. ಆದ್ದರಿಂದ, ನಿರಾಕ್ಷೇಪಣಾ ಪತ್ರಕ್ಕೆ ತಡೆ ನೀಡಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ರಾಜಕಾಲುವೆಗೆ ಸೇರಿದ ಜಾಗದಲ್ಲಿ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಹೇಗೆ ಅನುಮತಿ ನೀಡಲಾಗುತ್ತದೆ’ ಎಂದು ರಾಜ್ಯ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಪರ ವಕೀಲರು, ‘ಯಾರು ನಿರಾಕ್ಷೇಪಣಾ ಪತ್ರ ಪಡೆದಿದ್ದಾರೋ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಕಂಪನಿಯನ್ನೂ ಪ್ರತಿವಾದಿಯನ್ನಾಗಿ ಹೆಸರಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-18-1778660182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.