ಕೋಲಾರ: ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಕೋಲಾರ ಸಂಚಾರ ಪೊಲೀಸ್ ಠಾಣೆಯ ಎಎಸ್ಐಗೆ ₹ 500ದಂಡ ವಿಧಿಸಲಾಗಿದೆ.

ಮತ್ತೊಬ್ಬ ಎಎಸ್ಐ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಹಿಂಬದಿ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ. ಈ ಸಂಬಂಧ ಅವರಿಗೂ ದಂಡ ವಿಧಿಸಲಾಗಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಗಳು ಹರಿದಾಡಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಮೇಲಧಿಕಾರಿಗಳು ಕ್ರಮ ವಹಿಸಿದ್ದಾರೆ.

‘ಕಾನೂನು ರಕ್ಷಣೆ ಮಾಡಬೇಕಾದ ಪೊಲೀಸರೇ ನಿಯಮ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಸೂಚನೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-1330931120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.