ಕೋಲಾರ: ನಗರದ ನ್ಯಾಯಾಲಯದ ಆವರಣದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ ಅಪರಿಚಿತ ವೃದ್ಧೆಗೆ ಪೊಲೀಸ್ ಇಲಾಖೆಯ ಅಕ್ಕಪಡೆಯ ಸಿಬ್ಬಂದಿ ಉಪಚರಿಸಿದ್ದಾರೆ.

ಆವರಣದಲ್ಲಿ ಸುಮಾರು 70 ವರ್ಷದ ಮಹಿಳೆ ವಿಪರೀತ ಸುಸ್ತಿನಿಂದ ಬಿದ್ದಿರುವುದನ್ನು ಅಕ್ಕಪಡೆಯ ಕರ್ತವ್ಯದಲ್ಲಿದ್ದ ಗಲ್ಪೇಟೆ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಸುನಂದಮ್ಮ, ಅಕ್ಕಪಡೆಯ ಚಾಲಕರಾದ ಕೆ.ಸುಭಾಷ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಗಮನಿಸಿದ್ದಾರೆ.

ತಕ್ಷಣ ಮಹಿಳೆಯನ್ನು ವಿಚಾರಿಸಿ, ಪ್ರಾಥಮಿಕ ಉಪಚಾರ ನೀಡಿದ್ದಾರೆ. ಬಳಿಕ 108 ಆ್ಯಂಬುಲೆನ್ಸ್ಗೆ ಕರೆ ಮಾಡಿ ಮಹಿಳೆಯನ್ನು ಕೋಲಾರದ ಎಸ್ ಎನ್ ಆರ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-18-1141449968

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.