ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿ ಜೂಜಿನಲ್ಲಿ ಭಾಗಿಯಾಗಿರುವ ವಿಚಾರ ಮಾಧ್ಯಮಗಳಿಂದ ಗಮನಕ್ಕೆ ಬಂದಿದೆ. ಈ ಸಂಬಂಧ ತನಿಖೆ ಮಾಡುತ್ತಿದ್ದೇವೆ.
– ನಿಖಿಲ್ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಶ್ರೀಗಂಧ ಕದ್ದಿದ್ದವರ ಬಂಧನ
ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿಯ ಮಲ್ಲಸಂದ್ರ ಗ್ರಾಮದ ಬಚ್ಚಣ್ಣ ಎಂಬುವರ ಜಮೀನಿನಲ್ಲಿ ಶ್ರೀಗಂಧದ ಮರ ಕದ್ದಿದ್ದ ಆರೋಪಿಗಳನ್ನು ವೇಮಗಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ವಿ.ಕೋಟೆ ಮಂಡಲದ ಕೋಡಿ ಬಂಡೆ ಗ್ರಾಮದ ಸುಬ್ರಮಣಿ (28) ಹಾಗೂ ಅರುಣ್ (25) ಎಂದು ಗುರುತಿಸಲಾಗಿದೆ. ಸುಮಾರು ₹50 ಸಾವಿರ ಮೌಲ್ಯದ 40 ಕೆ.ಜಿ. ಶ್ರೀಗಂಧದ ತುಂಡುಗಳನ್ನು ಕಳವು ಮಾಡಿದ್ದು ವಶಕ್ಕೆ ಪಡೆಯಲಾಗಿದೆ ಎಂದು ನಿಖಿಲ್ ಹೇಳಿದರು.