ಬೇತಮಂಗಲ: ಸಮೀಪದ ಎನ್.ಜಿ.ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಗಾನಹಳ್ಳಿ ಗ್ರಾಮದ ಮುಖ್ಯ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆಗೆ ಡಾಂಬರು ಹಾಕಿಸಬೇಕೆಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿ.ಕೋಟ ಮುಖ್ಯರಸ್ತೆಯಿಂದ ಪೂಗಾನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 2 ಕಿ.ಮೀ ರಸ್ತೆಯು 15-20 ವರ್ಷಗಳ ಹಿಂದೆ ಡಾಂಬರೀಕರಣಗೊಂಡಿತ್ತು. ಆದರೆ, ಅಂದಿನಿಂದ ಇಂದಿನವರೆಗೆ ರಸ್ತೆಗೆ ಡಾಂಬರು ಹಾಕಿಲ್ಲ. ಹಾಗಾಗಿ ರಸ್ತೆಯು ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಹಾಗಾಗಿ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ರಸ್ತೆ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣ ಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-18-1100435965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.