ಕೋಲಾರ: ಕೇಂದ್ರ ಸರ್ಕಾರ ಪ್ರಕಟಿಸಿದ್ದ 4 ಕಾರ್ಮಿಕ ಸಂಹಿತೆಗಳ ಕರಡು ನಿಯಮಾವಳಿಗಳಿಗೆ ಕಾರ್ಮಿಕ ಸಂಘಟನೆಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸದೆ, ಅಂತಿಮ ನಿಯಮಾವಳಿಗಳನ್ನು ಪ್ರಕಟಿಸಿ ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತಂದಿರುವುದನ್ನು ಕೂಡಲೇ ವಾಪಸು ಪಡೆಯಬೇಕೆಂದು ಸಿಐಟಿಯು ನೇತೃತ್ವದಲ್ಲಿ ಮುಖಂಡರು ಮಂಗಳವಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಿ.ಎನ್.ಮಂಜುನಾಥ್ ಮಾತನಾಡಿ, ‘ಐದು ರಾಜ್ಯಗಳ ಚುನಾವಣೆಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಈ ಕ್ರಮವಾಗಿದೆ. ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿನ ಗೆದ್ದಿರುವ ಅಹಂಕಾರದೊಂದಿಗೆ ಈ ಕಪಟ ಹಾಗೂ ವಂಚನೆಯನ್ನು ಕೇಂದ್ರ ಸರ್ಕಾರ ದೇಶದ ಕಾರ್ಮಿಕ ವರ್ಗದ ವಿರುದ್ಧ ಮಾಡಿದೆ’ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ, ‘ದೇಶದ ದುಡಿಯುವ ಜನರ ಅಭಿಪ್ರಾಯಗಳನ್ನು ತಿರಸ್ಕರಿಸಿ, ವಿದೇಶಿ ಹಾಗೂ ಸ್ವದೇಶಿ ಕಾರ್ಪೊರೇಟ್ ಬಂಡವಾಳದಾರರ ಅನುಕೂಲಕ್ಕಾಗಿ ಈ ನಾಲ್ಕು ಸಂಹಿತೆಗಳನ್ನು ಜಾರಿಗೆ ತರಲಾಗಿದೆ’ ಎಂದರು

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕೃಷ್ಣ ಮಾತನಾಡಿ, ‘ಹಲವಾರು ದಶಕಗಳಿಂದ ಹೋರಾಟಗಳ ಮೂಲಕ ಗಳಿಸಲಾದ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಹಾಗೂ ಸವಲತ್ತುಗಳನ್ನು ನಾಶ ಮಾಡಲಾಗುತ್ತಿದೆ. ಕಾಯಂ ಉದ್ಯೋಗದ ಅವಕಾಶಗಳನ್ನು ಯುವ ಪೀಳಿಗೆಗಳಿಗೆ ಇಲ್ಲದಂತೆ ಮಾಡುವ ಕ್ರಮ ಇದಾಗಿದೆ. ನವ ಗುಲಾಮಗಿರಿಗೆ ಹಾಲಿ ಹಾಗೂ ಭಾವಿ ಕಾರ್ಮಿಕರನ್ನು ಒಳಪಡಿಸುವ ಕುತಂತ್ರವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು

ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ.ಕೃಷ್ಣಪ್ಪ ಮಾತನಾಡಿ, ‘ಸಂಘಟನೆಯು ಈ ಸಂಹಿತೆಗಳನ್ನು ಕಾರ್ಮಿಕರ ಜೀವನ ಮತ್ತು ಜೀವನೋಪಾಯಗಳ ಮೇಲಿನ ದಾಳಿ ಎಂದೇ ಪರಿಗಣಿಸುತ್ತದೆ. ಈ ಸಂಹಿತೆಗಳು ಕಾರ್ಮಿಕರ ಮೇಲೆ ಗುಲಾಮಗಿರಿಯನ್ನು ಹೇರುವುದು ಮಾತ್ರವಲ್ಲದೇ; ಕಾರ್ಮಿಕರ ಹಕ್ಕು ಹಾಗೂ ಪ್ರತಿಭಟಿಸುವ ಅವಕಾಶಗಳನ್ನು ಕಸಿದುಕೊಳ್ಳುತ್ತವೆ’ ಎಂದು ದೂರಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಗಾಂಧಿನಗರ ನಾರಾಯಣಸ್ವಾಮಿ, ಎ.ಆರ್.ಬಾಬು, ಕಾರ್ಯದರ್ಶಿಗಳಾದ ಎಂ.ಭೀಮರಾಜ್, ವೀರಭದ್ರ, ಶಿವಾನಂದ್, ಕಲ್ಪನಾ, ಅಮರನಾರಾಯಣ, ಕೇಶವರಾವ್, ವಿ.ಮಂಜುಳ, ಲೋಕೇಶ್ವರಿ, ರಾಜಮ್ಮ, ಶಿವರಾಜ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-18-1670764713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.