ಕೋಲಾರ: ರಾಜ್ಯದಾದ್ಯಂತ ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಂತೆ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಪೋಲಿಯೊ ಮತ್ತು ದಡಾರ ನಿರ್ಮೂಲನೆ ಮಾಡುವಲ್ಲಿ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರಬಾರದು. ಲಸಿಕೆ ನಿರಾಕರಿಸುವ ಕುಟುಂಬಗಳ ಮನವೊಲಿಸಿ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಿ’ ಸೂಚನೆ ನೀಡಿದರು.

28 ರಂದು ಜಿಲ್ಲೆಯಾದ್ಯಂತ ಬೂತ್ಗಳಲ್ಲಿ ಲಸಿಕೆ ಹಾಕಲಾಗುವುದು. ಜೂನ್ 29 ರಿಂದ ಜುಲೈ 1 ರವರೆಗೆ ಲಸಿಕೆ ಹಾಕದ ಮಕ್ಕಳನ್ನು ಪತ್ತೆಹಚ್ಚಲು ಮನೆ ಮನೆಗೆ ಭೇಟಿ ನೀಡಲಾಗುವುದು. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತು ವಲಸೆ ಕಾರ್ಮಿಕರ ಪ್ರದೇಶಗಳಲ್ಲಿ ಸಂಚಾರಿ ತಂಡಗಳ ಮೂಲಕ ಲಸಿಕೆ ನೀಡಬೇಕು ಎಂದರು.

ಜಿಲ್ಲೆಯ ಕೆಲವು ಭಾಗಗಳಲ್ಲಿ ವಿಶೇಷವಾಗಿ ಶ್ರೀನಿವಾಸಪುರ ಮತ್ತು ಮುಳಬಾಗಿಲು ತಾಲೂಕುಗಳಲ್ಲಿ ಕೆಲವು ಕುಟುಂಬಗಳು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದರು.

ಇಂತಹ ಕುಟುಂಬಗಳನ್ನು ಗುರುತಿಸಿ, ಸಮುದಾಯದ ಮುಖಂಡರು ಮತ್ತು ಧಾರ್ಮಿಕ ನಾಯಕರ ಸಹಾಯದಿಂದ ಅವರಲ್ಲಿ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಯಾವುದೇ ಪ್ರಕರಣಗಳು ವರದಿಯಾದರೆ ಅದನ್ನು ತಕ್ಷಣವೇ ಇಲಾಖೆಯ ಗಮನಕ್ಕೆ ತರಬೇಕು. ಇದಕ್ಕಾಗಿ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು ಪ್ರತಿ ತಿಂಗಳು ಖಾಸಗಿ ವೈದ್ಯರೊಂದಿಗೆ ಸಭೆ ನಡೆಸಿ ವರದಿ ಪಡೆಯಬೇಕು ಎಂದು ನಿರ್ದೇಶಿಸಿದರು.

ಲಸಿಕಾ ಕಾರ್ಯಕ್ರಮ ಯಶಸ್ಸುಗೊಳಿಸಲು ಕಾರ್ಮಿಕ, ಶಿಕ್ಷಣ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರಿಗೆ, ಬೆಸ್ಕಾಂ ಹಾಗೂ ಇನ್ನಿತರ ಇಲಾಖೆಗೆ ಸಮನ್ವಯ ಸಾಧಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಸಮಾಲೋಚಕರಾದ ಡಾ.ಮಿಸ್ಬಾ ಅವರು ಮುಂಬರುವ ಪಲ್ಸ್ ಪೋಲಿಯೊ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.

ದೇಶವು ಪೋಲಿಯೊ ಮುಕ್ತವಾಗಿದ್ದರೂ ನೆರೆ ರಾಷ್ಟ್ರಗಳಾದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಗಳಲ್ಲಿ ಇಂದಿಗೂ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ, ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಶಸ್ತ್ರಚಿಕಿತ್ಸೆಕ ಡಾ.ಜಗದೀಶ್, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಂದನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಫರ್ವೀನ್ ತಾಜ್, ಎಲ್ಲಾ ತ್ತಾಲ್ಲೂಕಿನ ಸಿಡಿಪಿಓ, ವಿವಿಧ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-18-1441558915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.