ಬೇತಮಂಗಲ: ಬೇಸಿಗೆ ಬಿಸಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಶಾಸಕಿ ರೂಪಕಲಾ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಅನುದಾನದಡಿ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನೂತನವಾಗಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಕೆಜಿಎಫ್ ತಾಲ್ಲೂಕಿನ ವೆಂಗಸಂದ್ರ ಗ್ರಾಮ ಪಂಚಾಯಿತಿ ಕೊಡಗೇನಹಳ್ಳಿ ಹಾಗೂ ಸೀತಂಪಲ್ಲಿ, ಹುಲ್ಕೂರು ಗ್ರಾಮ ಪಂಚಾಯಿತಿಯ ದೊಡ್ಡಕಾರಿ, ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಬಡಮಾಕನಹಳ್ಳಿಯಲ್ಲಿ ಈ ಘಟಕಗಳು ಸಾರ್ವಜನಿಕರ ಬಳಕೆಗೆ ಮುಕ್ತವಾದವು.

ನಂತರ ಮಾತನಾಡಿದ ಶಾಸಕಿ, ಬೇಸಿಗೆ ತೀವ್ರವಾಗಿದೆ. ಇಡೀ ಕ್ಷೇತ್ರದಲ್ಲಿ ನೀರಿನ ತೊಂದರೆಯಾಗದಂತೆ ನಿರಂತರ ನಿಗಾ ವಹಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಸಜ್ಜಾಗಿದ್ದೇವೆ ಎಂದರು.

ಕ್ಷೇತ್ರದ ಹಲವು ಭಾಗಗಳಲ್ಲಿ ಅಂತರ್ಜಲದಲ್ಲಿ ಫ್ಲೋರೈಡ್ ಅಂಶ ಹೆಚ್ಚಿದೆ. ಅಂತಹ ಪ್ರದೇಶಗಳಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ಘಟಕವನ್ನು ಸುಮಾರು ₹12ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹಂತ ಹಂತವಾಗಿ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಈ ಸೌಲಭ್ಯ ತಲುಪಿಸುವ ಮೂಲಕ ಕೆಜಿಎಫ್ ಕ್ಷೇತ್ರವನ್ನು ಕುಡಿಯುವ ನೀರಿನ ಸಮಸ್ಯೆಯಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮಸಂದ್ರ ನಾಗರಾಜ್, ಪದ್ಮಾನಾಭರೆಡ್ಡಿ, ರಾಮಕೃಷ್ಣ ರೆಡ್ಡಿ, ಅಪೋಸಿ ಗೌಡ, ಶ್ರೀರಾಮಪ್ಪ, ಅಯ್ಯಪಲ್ಲಿ ಮಂಜುನಾಥ್, ಯುವರಾಣಿ, ವೆಂಕಟಾಚಲಪತಿ, ಸುನಿತಾ ಚಂದ್ರಶೇಖರ್, ಮುರಳಿ, ಬೌಂಡರಿ ಬಾಬು, ಚಿದಂಬರಂ, ಕಾರ್ಯ ಪ್ರಸನ್ನ, ಕೃಷ್ಣೇಗೌಡ, ವಿಶ್ವನಾಥ್, ಕೃಷ್ಣಾರೆಡ್ಡಿ, ಮಾರ್ಕೊಂಡಪ್ಪ, ರಾಮಕೃಷ್ಣಪ್ಪ, ರಾಮಕೃಷ್ಣ ಗೌಡ, ರಾಜೇಂದ್ರ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರುಯ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-18-1773661191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.