ಕೆಜಿಎಫ್: ಮಹಿಳೆ ಕೇವಲ ಕುಟುಂಬದ ಕಣ್ಣಲ್ಲ, ಇಡೀ ಸಮಾಜದ ಪ್ರೇರಣಾ ಶಕ್ತಿ. ಅವರಿಗೆ ಸೂಕ್ತ ಅವಕಾಶ ಮತ್ತು ವೇದಿಕೆ ಕಲ್ಪಿಸುವುದು ನಾಗರಿಕ ಸಮಾಜದ ಕರ್ತವ್ಯ ಎಂದು ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ರಾಮಚಂದ್ರಪ್ಪ ಹೇಳಿದರು.

ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಸೋಮವಾರ ಗಂಗಾನಿಕೇತನ ಫೌಂಡೇಷನ್ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾದದ್ದು. ಮಹಿಳಾ ಸಬಲೀಕರಣದಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದರು.

ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲರಾದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಲಿಂಗ ತಾರತಮ್ಯ ಹೋಗಲಾಡಿಸಲು ಮಹಿಳಾ ಸಬಲೀಕರಣವನ್ನು ಬೆಂಬಲಿಸಲು ಸಮಾಜಕ್ಕೆ ಮಹಿಳೆಯರು ನೀಡಿರುವ ಕೊಡುಗೆಗಳನ್ನು ಸ್ಮರಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಶಿಕ್ಷಣ, ಆರೋಗ್ಯ, ಸಮಾಜ ಸೇವೆ ಮತ್ತು ಕೃಷಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಮತ್ತು ಅಸಂಘಟಿತ ಮಹಿಳಾ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು.

ಮುಖ್ಯ ಶಿಕ್ಷಕಿ ನುಸರತ್, ಗ್ರಾಪಂ ಮಾಜಿ ಉಪಾಧ್ಯಕ್ಷೆ ಶ್ವೇತಾ ಅಶ್ವಥ್, ಕೇಶವ ರೆಡ್ಡಿ, ಪಿ.ಎಂ.ಕೃಷ್ಣಪ್ಪ, ಮುನಿರಾಜು, ಮುನಿ ಕೃಷ್ಣಪ್ಪ, ಪ್ರಭಾಕರ್, ವೀರವೆಂಕಟಪ್ಪ, ವಿ.ಬಿ.ದೇಶಪಾಂಡೆ. ಮದಿರಪ್ಪ.ವಿ.ಮಂಜುನಾಥ್ ಗೌಡ, ಅನಿಲ್ ಕುಮಾರ್, ಚಂದ್ರಶೇಖರ್, ದುರ್ಗಮ್ಮ, ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.