ಕೋಲಾರ: ನಗರದ ಪಿ.ಸಿ.ಬಡಾವಣೆಯ ರೇಣುಕಾಂಭ ಸೇವಾ ಸಮಿತಿಯಿಂದ ರೇಣುಕಾ ಯಲ್ಲಮ್ಮ ದೇವಿಯ ಕರಗ ಮಹೋತ್ಸವದ ಸಮಾರೋಪದ ಅಂಗವಾಗಿ ಭಾನುವಾರ ಸಂಜೆ ನಡೆದ ಒನಕೆ ಕರಗ ನೃತ್ಯ ಆಕರ್ಷಕವಾಗಿತ್ತು.

ರಸ್ತೆ ಇಕ್ಕೆಲಗಳಲ್ಲಿ ಕಟ್ಟಡಗಳ ಮೇಲೆ ನಿಂತು ಸಾವಿರಕ್ಕೂ ಅಧಿಕ ಮಂದಿ ಈ ಅದ್ಭುತ ನೃತ್ಯವನ್ನು ಕಣ್ತುಂಬಿಕೊಂಡರು.

ಸುಮಾರು 5 ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು, ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ದೃಶ್ಯ ಮನಮೋಹಕವಾಗಿತ್ತು. ಕರಗದ ಪೂಜಾರಿ ಮಂಜುನಾಥ್ ಅವರ ಕಲಾ ಪ್ರೌಢಿಮೆಯ ಸಾಹಸಕ್ಕೆ ಜನರು ತಲೆದೂಗಿದರು.

ಒನಕೆಯನ್ನು ಕೈಯಿಂದ ಹಿಡಿಯದೇ ಒಂದು ತುದಿಯ ಮೇಲೆ ನೀರು ತುಂಬಿದ ಪಾತ್ರೆಯಿಟ್ಟು, ಮತ್ತೊಂದು ತುದಿಯನ್ನು ತಲೆ ಮೇಲಿಟ್ಟುಕೊಂಡು ನರ್ತಿಸುವ ಮೂಲಕ ಜನತೆ ನಿಬ್ಬೆರಗಾಗುವಂತೆ ಮಾಡಿದರು. ಒನಕೆ ಕರಗ ನೃತ್ಯಕ್ಕೂ ಮೊದಲು ಕಳಶಗಳ ನೃತ್ಯ ನಡೆಯಿತು.

ದೇವಾಲಯ ಸಮಿತಿ ಸದಸ್ಯ ಆರ್ಮುಗಂ ಕುಟುಂಬದವರು ಪ್ರಸಾದ ಉಣಬಡಿಸಿದರು. ರೇಣುಕಾಯಲ್ಲಮ್ಮ ದೇವಾಲಯ ಸಮಿತಿ ಅಧ್ಯಕ್ಷ ಕೆ.ಗಣೇಶ್ ಕರಗಮಹೋತ್ಸವದ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-18-512394773

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.