ಮುಳಬಾಗಿಲು: ಒಳ ಮೀಸಲಾತಿ ರಾಜ್ಯಪತ್ರದಲ್ಲಿ ಅಧಿಕೃತ ಪ್ರಕಟಣೆಯಾಗುವವರೆಗೂ ಯಾವುದೇ ನೇರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬಾರದೆಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಯಲುವಹಳ್ಳಿ ಪ್ರಭಾಕರ್ ಒತ್ತಾಯಿಸಿದ್ದಾರೆ.

ಒಳ ಮೀಸಲಾತಿ ಜಾರಿಯಾಗುವವರೆಗೂ ನೇರ ನೇಮಕಾತಿ ನಡೆಸಲು ಸಚಿವ ಸಂಪುಟ ಅಧಿಸೂಚನೆಯನ್ನು ಹಿಂಪಡೆದಿದೆ. ಇಂತಹ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪಂಚಾಯಿತಿಯಲ್ಲಿ ಕರ ವಸೂಲಿಗಾರರು, ಡಿಇಒ, ಗುಮಾಸ್ತರು ಸೇರಿದಂತೆ ಗ್ರಾ.ಪಂ. ಸಿಬ್ಬಂದಿಯನ್ನು ಕಾರ್ಯದರ್ಶಿ ಗ್ರೇಡ್ 2 ಮತ್ತು ಎಸ್ಡಿಎ ಹುದ್ದೆಗಳಿಗೆ ನೇಮಕಾತಿ ಮಾಡಲು ದಾಖಲೆ ಪರಿಶೀಲನೆ ನಡೆಸುತ್ತಿರುವುದು ಸರಿಯಲ್ಲ ಎಂದರು.

ಒಳ ಮೀಸಲಾತಿ ಶೇಕಡಾವಾರು ಪ್ರಮಾಣವನ್ನು ನಿಖರವಾಗಿ ನಿರ್ಧರಿಸಿ ರಾಜ್ಯಪತ್ರದಲ್ಲಿ ಪ್ರಕಟಣೆ ಆಗುವವರೆಗೂ ಯಾವುದೇ ನೇಮಕಾತಿ ನಡೆಸುವುದು ಕಾನೂನು ಬಾಹಿರ. ಹಾಗಾಗಿ ಕೂಡಲೇ ಕೋಲಾರ ಜಿಲ್ಲಾ ಪಂಚಾಯಿತಿಯಲ್ಲಿ ನೇಮಕಾತಿಗಾಗಿ ದಾಖಲೆ ಪರಿಶೀಲಿಸುದನ್ನು ನಿಲ್ಲಿಸಬೇಕೆಂದು ಪ್ರತಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-18-1114523809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.