ಕೋಲಾರ: 2025ರಲ್ಲಿ 942 ಅಪಘಾತಗಳು ಸಂಭವಿಸಿದ್ದು, 305 ಮಂದಿ ಮೃತಪಟ್ಟಿದ್ದಾರೆ. 570 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಮಾಹಿತಿ ನೀಡಿದರು.

ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ’ಯ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಐ-ರಾಡ್ ವರದಿಯ ಪ್ರಕಾರ ಜಿಲ್ಲೆಯಲ್ಲಿ 2023ರಲ್ಲಿ 877 ಅಪಘಾತಗಳು ಸಂಭವಿಸಿದ್ದು, 257 ಮಂದಿ ಮೃತಪಟ್ಟಿದ್ದಾರೆ, 542 ಮಂದಿ ಗಾಯಗೊಂಡಿದ್ದಾರೆ. 2024ರಲ್ಲಿ 998 ಅಪಘಾತಗಳಲ್ಲಿ 320 ಸಾವು ಸಂಭವಿಸಿದ್ದು, 612 ಮಂದಿ ಗಾಯಗೊಂಡಿದ್ದಾರೆ ಎಂದರು.

ರಾಷ್ಟ್ರೀಯ ಹೆದ್ದಾರಿ-75 ಜಿಲ್ಲೆಯಲ್ಲೇ ಅತಿ ಹೆಚ್ಚು ಅಪಘಾತ ಸಂಭವಿಸುವ ವಲಯವಾಗಿ ಗುರುತಿಸಲ್ಪಟ್ಟಿದೆ. 2025ರಲ್ಲಿ ಇಲ್ಲಿ 76ತೀವ್ರ ಅಪಘಾತ ಮತ್ತು 166 ಸಾಮಾನ್ಯ ಅಪಘಾತಗಳು ಸಂಭವಿಸಿವೆ. ರಾಜ್ಯ ಹೆದ್ದಾರಿಗಳ (ಎಸ್ಎಚ್) ಪೈಕಿ ಎಸ್ಎಚ್-82, ಎಸ್ಎಚ್-96 ಮತ್ತು ಎಸ್ಎಚ್-99 ರಸ್ತೆಗಳು ಹೆಚ್ಚಿನ ಅಪಾಯದ ವಲಯಗಳಾಗಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ತಗ್ಗಿಸಸಬೇಕು. ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಗುರುತಿಸಲಾದ ಪ್ರಮುಖ ಬ್ಲಾಕ್ ಸ್ಪಾಟ್ಗಳಾದ ಅರಾಭಿಕೊತ್ತನೂರು, ಚುಂಚದೇನಹಳ್ಳಿ, ಮದೇರಹಳ್ಳಿ ಮತ್ತು ಅಜ್ಜಪ್ಪನಹಳ್ಳಿ ಸ್ಥಳಗಳಲ್ಲಿ ತಕ್ಷಣವೇ ಎಂಜಿನಿಯರಿಂಗ್ ಸುಧಾರಣೆ ಕ್ರಮ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಿದರು.

ವಡಗೂರು ಮತ್ತು ತಂಬಿಹಳ್ಳಿಗಳಲ್ಲಿ ಅಂಡರ್ಪಾಸ್ (LVUP) ಹಾಗೂ ನರಸಿಂಹತೀರ್ಥ ಮತ್ತು ವಡ್ಡಹಳ್ಳಿಯಲ್ಲಿ ಮೇಲ್ಸೇತುವೆ ಕಾಮಗಾರಿಗಳನ್ನು ಬೇಗನೇ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ನಾಗಲಾಪುರ ಮತ್ತು ಅರಬಿಕೊತ್ತನೂರು ಭಾಗಗಳಲ್ಲಿ ಕಾರ್ಯನಿರ್ವಹಿಸದ ಬೀದಿ ದೀಪಗಳನ್ನು ತಕ್ಷಣವೇ ದುರಸ್ತಿಗೊಳಿಸಿ ರಾತ್ರಿ ವೇಳೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲೆಯಲ್ಲಿ ಸದ್ಯ 20 ಸಂಖ್ಯೆಯ '108 ಆ್ಯಂಬುಲೆನ್ಸ್'ಗಳು ಹಾಗೂ 26 ಆಸ್ಪತ್ರೆ ಆಧಾರಿತ ಆ್ಯಂಬುಲೆನ್ಸ್ಗಳ ಸಂವಹನ ಜಾಲ ಸಕ್ರಿಯವಾಗಿದೆ. ಎಐ ಆಧಾರಿತ ಕ್ಯಾಮೆರಾಗಳ ಮೂಲಕ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಕಣ್ಣಿಡಲು ಮತ್ತು ಶಾಲಾ ಮಕ್ಕಳು ಹಾಗೂ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಲು ಸಾರಿಗೆ ಇಲಾಖೆಗೆ ತಾಕೀತು ಮಾಡಿದರು.

ಸಭೆಯಲ್ಲಿ ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಕೋಲಾರ ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಸಾರಿಗೆ ಇಲಾಖೆಯ ಕೋಲಾರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಶ್ರೀನಿವಾಸ್, ಜಿಲ್ಲಾ ಸರ್ಜನ್ ಡಾ.ಜಗದೀಶ್, ನಗರಸಭೆ ಆಯುಕ್ತ ನವೀನ್ ಚಂದ್ರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಅಲ್ಮಾಸ್ ಫರ್ವೀನ್ ತಾಜ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಾಮಮೂರ್ತಿ, ಜಿಲ್ಲೆಗೆ ಸಂಬಂದಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

ಕೋಲಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆ ಬೇಗನೇ ಅಂಡರ್ಪಾಸ್, ಮೇಲ್ಸೇತುವೆ ಕಾಮಗಾರಿ ಮುಗಿಸಿ ಎಐ ಆಧಾರಿತ ಕ್ಯಾಮೆರಾಗಳ ಮೂಲಕ ನಿಗಾ ಇಡಿ

ಅಪಘಾತಕ್ಕೆ ಒಳಗಾದವರಿಗೆ ಮೊದಲ 48 ಗಂಟೆಗಳ ಕಾಲ ‘ಮುಖ್ಯಮಂತ್ರಿಗಳ ಸಾಂತ್ವನ ಯೋಜನಾ' ಅಡಿಯಲ್ಲಿ ₹ 1 ಲಕ್ಷ ಗಳವರೆಗೆ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಿ

–ಎಂ.ಆರ್.ರವಿ ಜಿಲ್ಲಾಧಿಕಾರಿ

ಸಾರಿಗೆ ಅದಾಲತ್ ನಡೆಸಲು ಸೂಚನೆ ರಸ್ತೆ ಸುರಕ್ಷತೆ ಇಲಾಖೆಗೆ ಸಂಬಂಧಿಸಿದಂತೆ ಜನರಿಗೆ ಸಿಗುವ ಸೇವೆಗಳ ಕುರಿತು ಮಾಹಿತಿಯನ್ನು ಸಾರ್ವಜನಿಕರಿಗೆ ಮುಟ್ಟಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ‘ಸಾರಿಗೆ ಅದಾಲತ್’ ಅನ್ನು ಇದೇ ಏಪ್ರಿಲ್ ತಿಂಗಳಿನಲ್ಲಿ ನಡೆಸಬೇಕು ಎಂದು ಎಂ.ಆರ್.ರವಿ ಸೂಚನೆ ನೀಡಿದರು. ರಸ್ತೆ ಸುರಕ್ಷತೆಯು ಕೇವಲ ಸರ್ಕಾರದ ಜವಾಬ್ದಾರಿಯಲ್ಲ ಸಾರ್ವಜನಿಕರು ಕೂಡ ಹೆಲ್ಮೆಟ್ ಧರಿಸುವುದು ಸೀಟ್ ಬೆಲ್ಟ್ ಧರಿಸುವುದು ಮತ್ತು ವೇಗದ ಮಿತಿಯನ್ನು ಪಾಲಿಸುವ ಮೂಲಕ ಸಹಕರಿಸಬೇಕು. ಪ್ರಮುಖ ರಸ್ತೆಗಳಲ್ಲಿ ಸ್ಪೀಡ್ ಬ್ರೇಕರ್ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.