ಶ್ರೀನಿವಾಸಪುರ: ತಾಲ್ಲೂಕಿನ ರೋಣೂರು ಗ್ರಾಮದಲ್ಲಿ ಸ್ಮಶಾನ ಜಾಗದ ವಿಚಾರವಾಗಿ ಸೋಮವಾರ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಮುಸ್ಲಿಂ ಸಮುದಾಯದವರವರುಸ್ಮಶಾನಕ್ಕೆ ಕಾಂಪೌಂಡ್ ನಿರ್ಮಿಸಲು ಮುಂದಾಗಿದ್ದರು. ಗ್ರಾಮದ ಹೇಮಂತ್ ಎಂಬುವರು ‘ಈ ಜಾಗ ತಮಗೆ ಸೇರಿದ್ದು. ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆ ನಮ್ಮ ಬಳಿ ಇವೆ’ ಎಂದು ಆಕ್ಷೇಪ ಎತ್ತಿದರು. ‘ಹಿಂದಿನಿಂದಲೂ ನಮ್ಮ ಪೂರ್ವಿಕರು ಈ ಜಾಗವನ್ನು ಸ್ಮಶಾನಕ್ಕೆ ಬಳಸುತ್ತಿದ್ದಾರೆ’ ಎಂದು ಮುಸ್ಲಿಂ ಸಮುದಾಯದವರು ಸಮಜಾಯಿಷಿ ನೀಡಿದರು.

ಆಗ ಎರಡೂ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಶ್ರೀನಿವಾಸಪುರ ವೃತ್ತ ನಿರೀಕ್ಷಕ ಶಂಕರಾಚಾರ್ಯ ಹಾಗೂ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-18-1286008662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.