ಬಂಗಾರಪೇಟೆ: ತಾಲ್ಲೂಕಿನ ಸಾಕರಸನಹಳ್ಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಾಯಕ ಕಾರ್ಯಪಾಲಕ ಆನಂದ್ ಮೂರ್ತಿ ಹಾಗೂ ಜೆಇ ಶ್ರೀನಿವಾಸ್ ಸೋಮವಾರ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದರು.

ಸಾಕರಸನಹಳ್ಳಿಯಿಂದ ಕದರಿನತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಚೂಪಾದ ಜಲ್ಲಿಕಲ್ಲುಗಳ ಮೇಲೆ ರೈತರು ಹಾಗೂ ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ ಎಂದು ಮಾರ್ಚ್ 23 ರಂದು ಪ್ರಜಾವಾಣಿಯಲ್ಲಿ ‘ಹದಗೆಟ್ಟ ರಸ್ತೆ: ಸವಾರರ ಪರದಾಟ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸೋಮವಾರ ಸಾಕರಸನಹಳ್ಳಿಗೆ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದರು.

ಈ ವೇಳೆ ಆನಂದ್ ಮೂರ್ತಿ ಮಾತನಾಡಿ, ಈ ರಸ್ತೆಯ ಶಾಶ್ವತ ದುರಸ್ತಿ ಮತ್ತು ಡಾಂಬರೀಕರಣಕ್ಕೆ ₹98 ಲಕ್ಷ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಆನಂದ್, ಎಸ್.ಕೆ.ಜಯಣ್ಣ, ಶಿವಕುಮಾರ್, ಬಸವರಾಜು, ಬಸಪ್ಪ ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-18-396851343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.