ಶ್ರೀನಿವಾಸಪುರ: ತಾಲ್ಲೂಕಿನ ರೋಣೂರು ಹೋಬಳಿ ಕುಮ್ಮಗುಂಟೆ ಗ್ರಾಮದ ಬಳಿಯ ಪುಂಗನೂರು ಕ್ರಾಸ್ ಬಳಿ ನೆಲೆಸಿರುವ ಪಾರ್ವತಿ ಸಮೇತ ಶ್ರೀಕಂಠೇಶ್ವರಸ್ವಾಮಿ 50ನೇ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನೆರವೇರಿತು.

ರಥೋತ್ಸವ ಅಂಗವಾಗಿ ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ದೇವಾಲಯವನ್ನು ಅಲಂಕರಿಸಲಾಗಿತ್ತು. ಜಾತ್ರೆ ಅಂಗವಾಗಿ ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.

ಮಧ್ಯಾಹ್ನ ಶುಭ ಲಗ್ನದಲ್ಲಿ ರಥಕ್ಕೆ ಗಣ್ಯರು ಚಾಲನೆ ನೀಡಲಾಯಿತು. ರಥ ಎಳೆಯುತ್ತಿದ್ದಂತೆ ಭಕ್ತರು ಬಾಳೆಹಣ್ಣು, ದವನ, ಹೂ ಮುಂತಾದ ಮಂಗಳಕರ ವಸ್ತುಗಳನ್ನು ಅರ್ಪಿಸಿ ಹರಕೆ ತೀರಿಸಿದರು.

ಜಾತ್ರೆಗೆ ಜಾನಪದ ಕಲಾ ತಂಡಗಳು ಮತ್ತಷ್ಟು ಮೆರಗು ತಂದವು. ಜೊತೆಗೆ ಅಲ್ಲಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ ನಡೆಯಿತು. ಜೊತೆಗೆ ಅನ್ನ ಸಂತರ್ಪಣೆ ನೆರವೇರಿತು.

ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್, ವಿಧಾನ ಪರಿಷತ್ತಿನ ಮಾಜಿ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜೆಡಿಎಸ್ ಮುಖಂಡ ಸಿ.ಎಂ.ಆರ್.ಶ್ರೀನಾಥ್, ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ, ದೇವಾಲಯ ಅಭಿವೃದ್ಧಿ ಸಮತಿಯ ಕಾರ್ಯದರ್ಶಿ ಶ್ರೀರಾಮರೆಡ್ಡಿ, ಮುಖಂಡರಾದ ನರಸಿಂಹರೆಡ್ಡಿ, ವೆಂಕಟರಾರೆಡ್ಡಿ, ರಘುನಾಥರೆಡ್ಡಿ, ಬಂಡಪಲ್ಲಿ ಕೃಷ್ಣಾರೆಡ್ಡಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-18-1037691431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.