ಶ್ರೀನಿವಾಸಪುರ: ತಾಲ್ಲೂಕಿನ ಕೊಡಿಚೆರವು ಗ್ರಾಮದಲ್ಲಿ ವೇಣುಗೋಪಾಲ ಸ್ವಾಮಿ ಬ್ರಹ್ಮ ರಥೋತ್ಸವ ಗುರುವಾರ ವೈಭವದಿಂದ ನೆರವೇರಿತು.

ಜಾತ್ರೆ ಅಂಗವಾಗಿ ಕಳೆದ ಎಂಟು ದಿನಗಳಿಂದ ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ಸಂಜೆ 4.30ರ ಶುಭ ಲಗ್ನದಲ್ಲಿ ರಥಕ್ಕೆ ಚಾಲನೆ ನೀಡಲಾಯಿತು.

ರಥಕ್ಕೆ ಚಾಲನೆ ಸಿಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು, ದವನ, ಹೂ ಮುಂತಾದ ಮಂಗಳಕರ ವಸ್ತುಗಳನ್ನು ಅರ್ಪಿಸಿ ಹರಕೆ ತೀರಿಸಿದರು.

ಜಾತ್ರೆಯಲ್ಲಿ ಅನ್ನಸಂತರ್ಪಣೆ, ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.

ಗುರುವಾರ ರಾತ್ರಿ ಪುಷ್ಪ ಪಲ್ಲಕ್ಕಿಯಲ್ಲಿ ಸ್ವಾಮಿಯ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಯಿತು. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹಾಗೂ ಸಂಸದ ಮಲ್ಲೇಶ್ ಬಾಬು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಲ್ಪನಾ, ಜಿ.ಎನ್.ವೆಂಕಟೇಶ್ ಗೌಡ, ರಾಮಚಂದ್ರಗೌಡ, ತೂಪಲ್ಲಿ ನಾರಾಯಣಸ್ವಾಮಿ, ಶ್ರೀನಿವಾಸ್, ಶಿವಾರೆಡ್ಡಿ, ಕೆ.ಎಂ.ಶಿವಾನಂದ, ಮುನಿ ವೆಂಕಟಪ್ಪ, ಪೊಲೀಸ್ ಕೃಷ್ಣಪ್ಪ, ಕೆ.ಎಂ.ಗೋಪಾಲಪ್ಪ, ಅಶ್ವತ್ ರೆಡ್ಡಿ, ಕೆ.ಎನ್.ವೆಂಕಟೇಶ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-18-1732948902

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.