ಶ್ರೀನಿವಾಸಪುರ: ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಅಂಗವಾಗಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಪಟ್ಟಣದ ಪುರಸಭೆ ಕಚೇರಿಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಆರಂಭದಲ್ಲಿ ತುಸು ಗದ್ದಲ, ಗೊಂದಲ ಉಂಟಾಯಿತು. ನಂತರ ಸಭೆ ಯಶಸ್ವಿಯಾಗಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿ, ‘ಇಬ್ಬರೂ ಮಹನೀಯರು ಎಲ್ಲಾ ಸಮಾಜಗಳ ಒಳಿತಿಗಾಗಿ ಹೋರಾಡಿರುವವರೇ. ಅದ್ದರಿಂದ ಅವರನ್ನ ಗೌರವಿಸುವುದು ನಮ್ಮ ಹಕ್ಕು. ಹೀಗಾಗಿ, ನಾವೆಲ್ಲೂರು ಸೇರಿ ಅಯಾ ದಿನದಂದೇ ಅದ್ದೂರಿಯಾಗಿ ಅವರ ಜಯಂತಿ ಆಚರಣೆ ಮಾಡಬೇಕು’ ಎಂದರು.

ಪಲ್ಲಕ್ಕಿಗಳು, ಡೊಳ್ಳು ಕುಣಿತ, ವಿವಿಧ ರೀತಿಯ ತಮಟೆ ವಾದ್ಯ ಹಾಗೂ ಜಾನಪದ ಕಲೆಗಳ ಮೂಲಕ ಆಚರಿಸೋಣ. ಜಗಜೀವನ್ ರಾಂ ಭವನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸುಂದರವಾದ ಕಟ್ಟಡವನ್ನು ಸಹ ನಿರ್ಮಾಣ ಮಾಡಲಾಗುವುದು. ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಈಗಾಗಲೇ ಮೀಸಲಿಟ್ಟಿರುವ 2 ಎಕರೆ ಜಮೀನಿನಲ್ಲಿ ಅಂಬೇಡ್ಕರ್ ಭವನಕ್ಕಾಗಿ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಮಾತನಾಡಿ, ‘ಬಾಬು ಜಗಜೀವನ್ ರಾಂ ಜಯಂತಿಯನ್ನು ಏ.5ರಂದು, ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಏ.14 ರಂದು ಆಚರಣೆ ಮಾಡಲಾಗುವುದು. ಎಲ್ಲವನ್ನು ಯಶಸ್ವಿಯಾಗಿ ಮಾಡಲು ಪ್ರಯತ್ನಿಸುತ್ತೇವೆ. ಇದು ಮಹನೀಯರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ. ಕಾರ್ಯಕ್ರಮವನ್ನ ಯಶಸ್ವಿಗೊಳಿಸಲು ಎಲ್ಲರೂ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಕೆ.ಸರ್ವೇಶ್, ವಿ.ನಾಗರಾಜ್, ಎನ್.ರಾಜೇಶ್, ಮಾದೇಶ್, ಉಪ್ಪರಪಲ್ಲಿ ತಿಮ್ಮಯ್ಯ, ಚಲ್ದಿಗಾನಹಳ್ಳಿ ಈರಪ್ಪ, ಮುನಿವೆಂಕಟಪಟಪ್ಪ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-18-816238945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.