ಶ್ರೀನಿವಾಸಪುರ: ತಾಲ್ಲೂಕಿನ ಮುಳಬಾಗಿಲು ಮುಖ್ಯರಸ್ತೆಯ ಹೊಗಳಗೆರೆ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತನನ್ನು ಕಳೆದ ಕೆಲವು ತಿಂಗಳುಗಳಿಂದ ತಾಲ್ಲೂಕಿನ ಕೇತಗಾನಹಳ್ಳಿಯ ಸಿಮೆಂಟ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕನಾಗಿದ್ದ ಒಡಿಶಾ ಮೂಲದ ದೇವುಬಾಸ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ಹೊಗಳಗೆರೆ ಕ್ರಾಸ್ ಸಮೀಪ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಅಪಘಾತವೆಸಗಿದ ವಾಹನದ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಶ್ರೀನಿವಾಸಪುರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಶಂಕರಾಚಾರ್ಯ ಸಿಬ್ಬಂದಿಯೊಂದಿಗೆ ಬಂದು ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-18-1555326978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.