ಶ್ರೀನಿವಾಸಪುರ: ತಾಲ್ಲೂಕಿನ ಹೋಬಳಿಯ ಪನಸಮಕನಹಳ್ಳಿ ಗ್ರಾಮದಲ್ಲಿ ಬೇಸಿಗೆ ತಾಪಮಾನ ಏರಿಕೆಯಾಗುತ್ತಿದ್ದಂತೆ ಕುಡಿಯುವ ನೀರಿನ ಕೊರತೆಯೂ ಎದುರಾಗಿದೆ.

ಗ್ರಾಮದಲ್ಲಿನ ಬಹುತೇಕ ಬೋರ್ವೆಲ್ಗಳು ಬರಿದಾಗಿವೆ. ಜನರು ಕುಡಿಯುವ ನೀರಿಲ್ಲದೆ ಪರಿತಪಿಸುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

ಪ್ರತಿ ಬೆಳಗ್ಗೆ ಮಹಿಳೆಯರು, ಪುರುಷರು ಮತ್ತು ಮಕ್ಕಳು ದೂರದಲ್ಲಿರುವ ನಲ್ಲಿಯಿಂದ ನೀರು ತರುತ್ತಾರೆ. ಮತ್ತೆ ಕೆಲವರು ಗ್ರಾಮಕ್ಕೆ ಬರುವ ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದು, ಅನಿಯಮಿತ ನೀರು ಸರಬರಾಜಿನಿಂದ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ನೀರಿನ ಕೊರತೆಯಿಂದ ಜಾನುವಾರುಗಳು ಮತ್ತು ದೈನಂದಿನ ಕಾರ್ಯಕ್ರಮಗಳಿಗೆ ತುಂಬಾ ಕಷ್ಟವಾಗಿದೆ. ಕೃಷಿ ಚಟುವಟಿಕೆಗಳ ಮೇಲೆ ಹೆಚ್ಚು ದುಷ್ಪರಿಣಾಮಗಳು ಬೀರಿದೆ. ಮಳೆ ಇಲ್ಲದೆ ಅಂತರ್ಜಲ ಮಟ್ಟ ಕುಸಿದಿರುವುದೇ ಈ ಸಮಸ್ಯೆಗೆ ಕಾರಣ ಎಂದು ಗ್ರಾಮಸ್ಥರು ಸಂಕಟ ಹೇಳಿಕೊಂಡರು.

‘ಗ್ರಾಮದಲ್ಲಿ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಪಿಡಿಒ, ಇಒ ಅವರ ಗಮನಕ್ಕೆ ತರಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಪ್ರತಿ ವರ್ಷದ ಬೇಸಿಗೆ ಸಂದರ್ಭದಲ್ಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂಬ ಭರವಸೆ ನೀಡಲಾಗುತ್ತದೆ. ಆದರೆ, ನಂತರ ಯಾರೂ ನಮ್ಮತ್ತ ಗಮನಹರಿಸುವುದಿಲ್ಲ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಹೊಸ ಬೋರ್ವೆಲ್ ಕೊರೆದು, ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿ ಮಾಡಬೇಕು ಎಂದು ತಾಲ್ಲೂಕು ಆಡಳಿತವನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.