ಶ್ರೀನಿವಾಸಪುರ: ತಾಲ್ಲೂಕಿನ ಎಚ್.ಜಿ.ಹೊಸೂರು ಗ್ರಾಮದಲ್ಲಿ ₹ 90 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಹೋಳೂರ ಹೋಬಳಿಯ ಗ್ರಾಮಗಳಿಗೆ ಮೂಲ ಸೌಲಭ್ಯ ಅಭಿವೃದ್ಧಿಗೆ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ಎಲ್ಲಾ ಗ್ರಾಮಗಳಿಗೆ ಮೂರು ತಿಂಗಳೊಳಗೆ ಹೈಮಾಸ್ಟ್ ದೀಪ ಅಳವಡಿಸಲಾಗುವುದು ಎಂದರು.

ಮುದವಾಡಿ ಕಟ್ಟೆಯ ಸಮೀಪ ಸೇತುವೆ ನಿರ್ಮಾಣ ಮಾಡಲಾಗುವುದು. ಹಾಗಾಗಿ ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟವನ್ನು ಕಾಪಾಡಬೇಕೆಂದು ಸೂಚಿಸಿದರು.

ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಮುದವಾಡಿ ಗಿರೀಶ್, ಅನಿತಾ ಲೋಕೇಶ್, ಮಾಲಿನಿ ಶೇಖರ್ ಬಾಬು, ಶ್ರೀನಿವಾಸ್ ಬಾಬು, ಕಡವನಹಳ್ಳಿ ಕೇಶವ ಮೂರ್ತಿ, ಶ್ರೀನಿವಾಸ್, ಜಡೀರಿ ಗೋಪಾಲ್, ವಿನಯ್ ಬೀರೇಗೌಡ, ವಿವೇಕ ರೆಡ್ಡಿ, ಬಿ.ಎನ್.ನಾರಾಯಣಗೌಡ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-18-2027163543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.