ಶ್ರೀನಿವಾಸಪುರ: ಗ್ರಾಮ ಪಂಚಾಯಿತಿಗಳಲ್ಲಿ ನೀರಿನ ಸಮಸ್ಯೆ ನೀಗಿಸಲು ಅನುದಾನ ಕೊರತೆ ಇಲ್ಲ. ಕ್ರಿಯಾಯೋಜನೆ ಸಿದ್ಧಪಡಿಸಿಕೊಂಡು ತಾಲ್ಲೂಕು ಪಂಚಾಯಿತಿ ಇಒರಿಂದ ಅನುಮೋದನೆ ಪಡೆದು ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಸೂಚನೆ ನೀಡಿದರು.

ತಾಲ್ಲೂಕಿನ ಹೊಗಳಗೆರೆ ಸಸ್ಯ ಕ್ಷೇತ್ರ ಸಭಾಂಗಣದಲ್ಲಿ ಶ್ರೀನಿವಾಸಪುರ ಮತ್ತು ಮುಳಬಾಗಿಲು ತಾಲ್ಲೂಕಿನ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಹಾಗೂ ಪಿಡಿಒಗಳ ಸಭೆ ನಡೆಸಿ ಮಾತನಾಡಿದರು. ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರುತ್ತಿದೆ. ಈಗಾಗಲೇ ಕೆಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರನ್ನು ಹರಿಸುವ ವ್ಯವಸ್ಥೆಗಳನ್ನು ಸ್ಥಳೀಯ ಅಧಿಕಾರಿಗಳು ಮಾಡಿದ್ದಾರೆ. ಇನ್ನಷ್ಟು ಸಮಸ್ಯೆ ಇದ್ದರೆ ಅವುಗಳನ್ನು ಪಟ್ಟಿ ಮಾಡಿಕೊಡಬೇಕು ಎಂದು ನಿರ್ದೇಶನ ನೀಡಿದರು. ಶ್ರೀನಿವಾಸಪುರದಲ್ಲಿ 23 , ಮುಳಬಾಗಿಲಿನಲ್ಲಿ 29 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬರಬಹುದೆಂದು ಗುರ್ತಿಸಲಾಗಿದೆ. ಜಿಲ್ಲೆಯಲ್ಲಿ ಬಹುತೇಕ ಶುದ್ಧನೀರಿನ ಘಟಕಗಳು ಇವೆ. ಜಿಲ್ಲೆಯಲ್ಲಿ 94 ಘಟಕ ದುರಸ್ತಿಗೆ ಬಾಕಿ ಉಳಿದಿದ್ದು, ಶ್ರೀನಿವಾಸಪುರ ತಾಲ್ಲೂಕಿಗೆ ಸಂಬಂಧಿಸಿದಂತೆ 24 ಘಟಕಗಳು ರಿಪೇರಿಗೆ ಇವೆ. ಮುಂದಿನ ವಾರದಲ್ಲಿ 14 ಘಟಕ ರಿಪೇರಿ ಆಗಲಿವೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-18-1613313668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.