ಶ್ರೀನಿವಾಸಪುರ: ಪಟ್ಟಣದ ಜಮ್ಮಾ ಹಾಗೂ ನೂರಾನಿ ಮಸೀದಿಯಲ್ಲಿ ಪುರಸಭೆ ವತಿಯಿಂದ ಘನ ತ್ಯಾಜ್ಯ ನಿರ್ವಹಣೆ ಕುರಿತು ಶುಕ್ರವಾರ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಜಿಲ್ಲಾ ಘನ ತ್ಯಾಜ್ಯ ನಿರ್ವಹಣೆ ನೋಡಲ್ ಅಧಿಕಾರಿ ನವೀನ್ ಚಂದ್ರ ಮಾತನಾಡಿ, ಮನೆಮಟ್ಟದಲ್ಲೇ ಕಸವನ್ನು ನಾಲ್ಕು ವಿಧವಾಗಿ ವಿಂಗಡಿಸಬೇಕು. ಹಸಿ, ಒಣ ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಅಪಾಯಕಾರಿ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಪುರಸಭೆಗೆ ನೀಡಿದರೆ ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡುವುದು ಸುಲಭವಾಗುತ್ತದೆ ಎಂದರು.

ಕಸವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರ ಮಾಲಿನ್ಯ ಹೆಚ್ಚುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆಗೂ ಕಾರಣವಾಗುತ್ತದೆ. ಹಾಗಾಗಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದರು.

ಮಸೀದಿಗೆ ಆಗಮಿಸಿದ್ದ ನೂರಾರು ಮಂದಿಗೆ ಅರಿವು ಮೂಡಿಸಲಾಯಿತು.

ಪುರಸಭೆ ಮುಖ್ಯಾಧಿಕಾರಿ ನಾಗರಾಜ್, ಪರಿಸರ ಅಭಿಯಂತರ ಲಕ್ಷ್ಮೀಶ್, ಹಿರಿಯ ಆರೋಗ್ಯ ನಿರೀಕ್ಷಕ ವಿಜಯ್, ಕಿರಿಯ ಆರೋಗ್ಯ ನಿರೀಕ್ಷಕ ಸುರೇಶ್, ಕಂದಾಯ ಅಧಿಕಾರಿ ಶಂಕರ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-18-2085943655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.