ಕೋಲಾರ: ಕೋಲಾರ ಜಿಲ್ಲಾ ಸರ್ಕಾರಿ ನೌಕರರ ತಂಡದವರು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಬ್ಯಾಸ್ಕೆಟ್ಬಾಲ್ ಟೂರ್ನಿಯಲ್ಲಿ ಮೊದಲ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 24ರಿಂದ 26ರವರೆಗೆ ನಡೆದ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದಾರೆ.

ಕೋಲಾರ ತಂಡ ಸೆಮಿಫೈನಲ್ ಪಂದ್ಯದಲ್ಲಿ ಬೆಂಗಳೂರು ನಗರದ ವಿರುದ್ಧ ಜಯ ಗಳಿಸಿತು. ಫೈನಲ್ ಪಂದ್ಯದಲ್ಲಿ ಮಂಡ್ಯ ತಂಡವನ್ನು ಪರಾಭವಗೊಳಿಸಿ ಪ್ರಶಸ್ತಿ ಗೆದ್ದಿತು.

ತಂಡದ ನಾಯಕನಾಗಿರುವ ಕೋಲಾರ ತಾಲ್ಲೂಕಿನ ಕಂದಾಯ ನಿರೀಕ್ಷಕ ಎನ್.ಎಸ್.ರಾಜೇಂದ್ರ ಪ್ರಸಾದ್ ಅವರು 8ನೇ ಬಾರಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಜಯಿಸಿರುತ್ತಾರೆ.

ತಂಡದಲ್ಲಿ ಪುರುಷೋತ್ತಮ್, ಗೋಪಾಲಕೃಷ್ಣ, ಡಾ.ಗಾಯನ್, ದೇವೇಂದ್ರ, ಮನಿಷ್ ಬಾಬು, ಫಿಲಿಪ್ಸ್, ಕೃಷ್ಣ, ಪೃಥ್ವಿ, ಚಂದನ್, ಶೈಲೇಂದ್ರ, ಭರತೇಶ್ವರ ಇದ್ದರು. ತಂಡದ ತರಬೇತುರಾಗಿ ಗುರುಪ್ರಸಾದ್ ಹಾಗೂ ವಿಶ್ವನಾಥ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-18-441726912

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.