ಕೋಲಾರ: ‘ಸಂಸದ ಮುನಿಸ್ವಾಮಿ ಅವರು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ. ಆದರೆ, ನಾನು ಆತುರದಲ್ಲಿ ಅವರ ವಿರುದ್ಧ ಹೇಳಿಕೆ ನೀಡಿದೆ’ ಎಂದು ಬಿಜೆಪಿ ಬಂಗಾರಪೇಟೆ ತಾಲ್ಲೂಕು ಘಟಕದ ಮಾಜಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ಗೌಡ ಸ್ಪಷ್ಟಪಡಿಸಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಒಕ್ಕಲಿಗರು ತಮಗೆ ಮತ ಹಾಕಿಲ್ಲ ಎಂದು ಸಂಸದರು ಹೇಳಿರುವುದಾಗಿ ನಾನು ನೀಡಿದ್ದ ಹೇಳಿಕೆ ವಾಪಸ್ ಪಡೆಯುತ್ತಿದ್ದೇನೆ. ಸಂಸದರು ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ’ ಎಂದು ಹೇಳಿದರು.

‘ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗರು ಬಿಜೆಪಿ ಅಭ್ಯರ್ಥಿಗೆ ಕಡಿಮೆ ಮತ ಹಾಕಿದ್ದರು. ನಂತರ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಮತ ಹಾಕಿದರು ಎಂದು ಸಂಸದರು ಹೇಳಿಕೆ ನೀಡಿದ್ದರು. ಆದರೆ, ಅವರ ಹೇಳಿಕೆ ತಪ್ಪಾಗಿ ಅರ್ಥೈಸಿಕೊಂಡಿದ್ದೆ. ಈಗ ಸತ್ಯದ ಅರಿವಾಗಿದೆ. ಬಂಗಾರಪೇಟೆ ಬಿಜೆಪಿ ಮುಖಂಡ ಹನುಮಪ್ಪ ಹಾಗೂ ಕೆಲ ಕಾರ್ಯಕರ್ತರು ಸ್ವಾರ್ಥಕ್ಕಾಗಿ ನನ್ನನ್ನು ಮುಂದೆ ಬಿಟ್ಟು ಬಲಿಪಶು ಮಾಡಿದರು’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.