ಮುಳಬಾಗಿಲು (ಕೋಲಾರ): ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ಕಣ್ಮರೆಯಾಗಿರುವ ಮುಳಬಾಗಿಲು ತಾಲ್ಲೂಕಿನ ಎಂ.ಕೊತ್ತೂರು ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯಾರ್ಥಿನಿಯರ ದೇಹ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದು, ಒಬ್ಬ ವಿದ್ಯಾರ್ಥಿನಿ ಮಂಗಳವಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಳು. ಮೂವರು ವಿದ್ಯಾರ್ಥಿನಿಯರು ಕಣ್ಮರೆಯಾಗಿದ್ದಾರೆ. ಇನ್ನು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರಾವಂತಿ ಗೋಪಾಲಪ್ಪ (15) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯ (15) ಹಾಗೂ ವಂದನಾ (15) ಕಣ್ಮರೆ ಆಗಿದ್ದಾರೆ. ಯಶೋದಾ (15), ವೀಕ್ಷಣಾ (15) ಹಾಗೂ ಲಿಪಿಕಾ (15) ಮುರುಡೇಶ್ವರದ ಆರ್ಎನ್ಎಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು. ಎಲ್ಲರೂ 9ನೇ ತರಗತಿಯಲ್ಲಿ ಓದುತ್ತಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲೆ ಶಶಿಕಲಾ ಹಾಗೂ ಅತಿಥಿ ಶಿಕ್ಷಕರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ.

ಮೃತರ ಕುಟುಂಬಕ್ಕೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ (ಕ್ರೈಸ್) ₹ 5 ಲಕ್ಷ ಪರಿಹಾರ ಘೋಷಿಸಲಾಗಿದೆ.

ವಸತಿ ಶಾಲೆಯ 46 ವಿದ್ಯಾರ್ಥಿಗಳು ಹಾಗೂ 8 ಶಿಕ್ಷಕರು ಸೇರಿದಂತೆ 54 ಮಂದಿ ಭಾನುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದರು.
.ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿನಿ ಸಮುದ್ರ ಪಾಲು: ಮೂವರು ಕಣ್ಮರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.