ಕೋಲಾರ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ನಿಂದ ಹಮ್ಮಿಕೊಂಡಿದ್ದ ಬೇಸಿಗೆ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ ಗುರುವಾರ ನಡೆಯಿತು.

ಪೋಷಕರು ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳನ್ನಾಗಿಸಿ ಕ್ರೀಡೆಗಳಿಂದ ದೂರ ಮಾಡುವುದು ಸರಿಯಲ್ಲ. ಕ್ರೀಡೆಗಳಿಂದಲೂ ಬದುಕು ಉಜ್ವಲವಾಗುತ್ತದೆ. ಉನ್ನತ ಶಿಕ್ಷಣ, ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ಇದೆ ಎಂದು ಕರ್ನಾಟಕ ಪ್ಯಾರಾ ಒಲಿಂಪಿಕ್ಸ್ ಅಸೋಷಿಯೇಷನ್ ಜಿಲ್ಲಾಧ್ಯಕ್ಷ ಕೆ.ಜಯದೇವ್ ತಿಳಿಸಿದರು.

ಪಠ್ಯದಿಂದ ಮಾತ್ರವೇ ಸಾಧನೆ ಸಾಧ್ಯ ಎಂಬ ಮಾತು ಬೇಡ. ಕ್ರೀಡೆಗಳಲ್ಲೂ ಉತ್ತಮ ಸಾಧನೆಯೊಂದಿಗೆ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಖ್ಯಾತಿ ಗಳಿಸಿರುವ ಅನೇಕ ಕ್ರೀಡಾಪಟುಗಳು ನಮ್ಮ ಮುಂದೆ ಇದ್ದಾರೆ ಎಂದರು.

ಒಲಿಂಪಿಕ್ಸ್ನಲ್ಲಿ ಯಾವ ದೇಶ ಎಷ್ಟು ಚಿನ್ನದ ಪದಕ ಗಳಿಸುತ್ತದೆ ಎಂಬುದನ್ನು ಕಾತರದಿಂದ ನೋಡುತ್ತೇವೆ. ಆದರೆ ನಮ್ಮ ದೇಶ ಇಲ್ಲಿನ ಜನಸಂಖ್ಯೆಗೆ ತಕ್ಕಂತೆ ನಿರೀಕ್ಷಿತ ಸಾಧನೆ ಮಾಡುತ್ತಿಲ್ಲ ಎಂಬ ನೋವು ಇದೆ ಎಂದು ನುಡಿದರು.

ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ, ಅಧ್ಯಕ್ಷತೆ ವಹಿಸಿದ್ದ ಅಥ್ಲೇಟಿಕ್ಸ್ ಅಸೋಸಿನೇಷನ್ ಅಧ್ಯಕ್ಷ ಜಗನ್ನಾಥ್ ಮಾತನಾಡಿದರು.

ಏ.15 ರಿಂದ ಆರಂಭವಾದ ಬೇಸಿಗೆ ಶಿಬಿರ 22 ದಿನ ನಡೆದಿದೆ. ಶಿಬಿರಾರ್ಥಿಗಳು ಹಾಗೂ ಪೋಷಕರು ತಮ್ಮ ಅನಿಸಿಕೆ ಹಂಚಿಕೊಂಡರು. ಶಿಬಿರದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-18-2019873315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.