ಕೋಲಾರ: ಕೋಲಾರ ನಗರ ನಿರ್ಮಾತೃ, ಅಭಿವೃದ್ಧಿ ಹರಿಕಾರ ಟಿ.ಚನ್ನಯ್ಯ ಅವರ ಪುತ್ಥಳಿ ಸ್ಥಾಪಿಸಬೇಕೆಂಬ ಸುಮಾರು 30 ವರ್ಷಗಳ ಕನಸು ಕೊನೆಗೂ ನನಸಾಗಿದೆ.

ನಗರದ ರಂಗಮಂದಿರ ಆವರಣದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಪುತ್ಥಳಿ ಅನಾವರಣಗೊಳಿಸಿದರು.

ಶಾಸಕರಾದ ಕೊತ್ತೂರು ಮಂಜುನಾಥ್, ಎಸ್.ಎನ್.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಎನ್.ವಿಜಯಲಕ್ಷ್ಮಿ, ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ, ಟಿ.ವಿಜಯಕುಮಾರ್ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು. ಟಿ.ಚನ್ನಯ್ಯ ಕುಟುಂಬದ ಬಾಲಾಜಿ ಚನ್ನಯ್ಯ, ದೀಪಕ್, ಹರೀಶ್, ಕೃಷ್ಣಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಟಿ.ಚನ್ನಯ್ಯ ಅವರ ಪುತ್ಥಳಿ ಸ್ಥಾಪಿಸಬೇಕೆಂಬುದು ಬಹಳ ವರ್ಷಗಳ ಕೂಗಾಗಿತ್ತು. ಅದಕ್ಕೆ ಜಿಲ್ಲಾಧಿಕಾರಿ ಎಂ.ಆರ್.ರವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಎನ್.ವಿಜಯಲಕ್ಷ್ಮಿ ಅವಧಿಯಲ್ಲಿ ಕಾಲ ಕೂಡಿಬಂದಿದೆ.

ಅನಾವರಣದ ಬಳಿಕ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ರಂಗಮಂದಿರ ಆವರಣದಲ್ಲಿ ಚನ್ನಯ್ಯ ಅವರ ಸಾಕ್ಷ್ಯಚಿತ್ರ ವೀಕ್ಷಿಸಿದರು.

ಇದೇ ಸಂದರ್ಭದಲ್ಲಿ ಕೆಲ ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ತಮ್ಮನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ, ಪೂರ್ವಭಾವಿ ಸಭೆ ನಡೆಸಿಲ್ಲ ಎಂದು ದೂರಿದರು.

ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ‘ಕೋಲಾರ ಹಾಗೂ ಚಿಕ್ಕಬಳ್ಳಾಪುರ ಅಭಿವೃದ್ಧಿ ಆಗಲು ಕಾರಣ ಚನ್ನಯ್ಯ. ಇಡೀ ದೇಶಕ್ಕೆ ಆದರ್ಶರಾದವರು. ಅವರ ಕಾಲಘಟ್ಟದಲ್ಲಿ ಬಹಳ ಅಭಿವೃದ್ಧಿ ಆಗಿದೆ’ ಎಂದು ಹೇಳಿದರು.

ರಂಗ ಮಂದಿರ ಆವರಣದಲ್ಲಿ ಚನ್ನಯ್ಯ ಪುತ್ಥಳಿ ನಿರ್ಮಿಸಿರುವುದು ಸ್ವಾಗತಾರ್ಹ. ಆದರೆ, ಕುಟುಂಬ ವರ್ಗ, ಜಿಲ್ಲೆಯ ಬಲಗೈ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇನ್ನು ಅದ್ದೂರಿಯಾಗಿ ಮಾಡಬೇಕಿತ್ತು. ಈ ಭಾಗದಲ್ಲಿ ಬಲಗೈ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಇಲಾಖೆ ಈ ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಈ ಬಗ್ಗೆ ಕ್ರಮ ಆಗಬೇಕು ಎಂದರು.

ಕೋಲಾರಕ್ಕೆ ಮೊದಲು ವಿದ್ಯುತ್: ಚನ್ನಯ್ಯ ಅವರು ಕೋಲಾರ ನಗರಕ್ಕೆ ಬೇಕಾದ ಸೌಲಭ್ಯಗಳ ಕುರಿತು ಕನಸು ಕಂಡಿದ್ದು ಮಾತ್ರವಲ್ಲದೇ; ಸ್ಯಾನಿಟೋರಿಯಂ ಆಸ್ಪತ್ರೆ, ನಚಿಕೇತ ನಿಲಯದಂಥ ಹಾಸ್ಟೆಲ್, ಹಳೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಕಾರಣರಾದವರು. ಕೋಲಾರಕ್ಕೆ ಮೊದಲು ವಿದ್ಯುತ್ ತಂದವರು.

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರೊಂದಿಗೆ ಒಡನಾಟ ಹೊಂದಿದ್ದ ಚನ್ನಯ್ಯ, ಭಾರತ ಸಂವಿಧಾನ ಪರಿಷತ್ತಿನ ಸದಸ್ಯರಾಗಿದ್ದರು. ಮುಳಬಾಗಿಲು ಕ್ಷೇತ್ರದಿಂದ ಅವಿರೋಧವಾಗಿ ಗೆದ್ದು ಶಾಸಕರಾಗಿದ್ದ ಅವರು ಕೆಂಗಲ್ ಹನುಮಂತಯ್ಯ ಸರ್ಕಾರದಲ್ಲಿ ಎಂಟು ಖಾತೆಗಳ ಸಚಿವರಾಗಿದ್ದರು. ಕೆಲ ಕಾಲ ತಮಿಳುನಾಡು ರಾಜ್ಯಪಾಲರಾಗಿದ್ದರು. ಅದಕ್ಕೂ ಮೊದಲು ರಾಜ್ಯಸಭೆಯಲ್ಲಿ ನಾಮ ನಿರ್ದೇಶಿತ ಸದಸ್ಯರಾಗಿದ್ದರು.

ಟಿ.ಚನ್ನಯ್ಯ ಅವರ ಮೊಮ್ಮಗ ಹರೀಶ್ ಹಾಗೂ ದೀಪಕ್ ಮಾತನಾಡಿ, ‘ಸರ್ಕಾರದಿಂದ ಬರುವ ಅನುದಾನದಲ್ಲಿ ಈ ಕೆಲಸ ನಡೆದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಉತ್ತಮ ಕೆಲಸ ಮಾಡಿದ್ದಾರೆ. ಸುಮಾರು ಎರಡು ತಿಂಗಳಿಂದ ಕಷ್ಟಪಟ್ಟಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.