ಬೇತಮಂಗಲ: ಸಮೀಪದ ಟಿ.ಗೊಲ್ಲಹಳ್ಳಿ ಹೊರವಲಯದ ಕೆರೆ ಅಂಗಳದಲ್ಲಿ ತಬಾರಹಳ್ಳಿ ಬೆಳಕು ಟ್ರಸ್ಟ್ ಹಾಗೂ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಕುಮಾರ್ ಮಾತನಾಡಿ, ‘ನಾವು ಮನೆಗಳಲ್ಲಿ ಸಾಕುಪ್ರಾಣಿಗಳನ್ನು ಹೇಗೆ ಪ್ರೀತಿಯಿಂದ ಪೋಷಿಸುತ್ತೇವೆಯೋ, ಅದೇ ರೀತಿ ಗಿಡಮರಗಳನ್ನು ಪೋಷಿಸಿದಾಗ ಮಾತ್ರ ಪರಿಸರ ಉಳಿಸಲು ಸಾಧ್ಯ. ಕೇವಲ ಪರಿಸರ ಪ್ರೇಮಿಗಳಾದರೆ ಸಾಲದು, ಪರಿಸರ ಆರಾಧಕರಾಗಬೇಕು’ ಎಂದು ಅಭಿಪ್ರಾಯಪಟ್ಟರು.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನೆನಪಿನ ಸಂಕೇತವಾಗಿ ಗಿಡಗಳನ್ನು ವಿತರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಒತ್ತು ನೀಡಿ ಎಂದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಜಯಲಕ್ಷ್ಮಿ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಮುಜಾಫರ್ ಮಂಜೂರಿ, ನ್ಯಾಯಾಧೀಶ ಶೆಮಿದ, ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲ್ ಗೌಡ, ಬೇತಮಂಗಲ ವೃತ್ತ ನಿರೀಕ್ಷಕ ರಂಗಶಾಮಯ್ಯ, ನಾಗರಾಜ್, ಪಿಡಿಒ ಶ್ರೀನಿವಾಸ್ ಮೂರ್ತಿ, ರಾಧಾಮಣಿ, ಬಾಬು, ಪಾರ್ಥ, ಲೋಕೇಶ್, ಆನಂದ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-18-1378541533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.