ಕೋಲಾರ: ನಗರದ ಹೊರವಲಯದ ಟಮಕದಲ್ಲಿ ರೇಣುಕಾ ಯಲ್ಲಮ್ಮ ದೇವಿಯ ಹೂವಿನ ಕರಗ ಮಹೋತ್ಸವವು ಭಾನುವಾರ ರಾತ್ರಿ ಅಪಾರ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ನೆರವೇರಿತು.

ಕರಗದ ಪೂಜಾರಿ ರೇಣುಕಾ ಯಲ್ಲಮ್ಮ ದೇವಾಲಯದ ಮುಂಭಾಗದ ಆವರಣದಲ್ಲಿ ಮಂಗಳ ವಾದ್ಯ, ಹಲಗೆಗಳ ಲಯಬದ್ಧ ತಾಳಕ್ಕೆ ತಕ್ಕಂತೆ ನರ್ತಿಸಿದರು.

ಹೂವಿನ ಕರಗದೊಂದಿಗೆ ರಕ್ಷಕ ಭಟರಂತೆ ಕತ್ತಿ ಹಿಡಿದು ಸಂಚರಿಸುವ ವೀರಕುಮಾರರು ಕರಗ ನೃತ್ಯದ ವೇದಿಕೆಯ ಮೇಲೆ ಹಲಗು ಸೇವೆ ನೀಡಿದರು. ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿದ ಕರಗಕ್ಕೆ ಜನರು ಪೂಜೆ ಸಲ್ಲಿಸಿದರು. ದೇವಾಲಯದ ಮುಂಭಾಗ ಅಗ್ನಿಕುಂಡ ಪ್ರವೇಶ ನಡೆಯಿತು. ಕರಗ ಮಹೋತ್ಸವದ ಪ್ರಯುಕ್ತವಾಗಿ ಟಮಕ ನಗರದಾದ್ಯಂತ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು.

ಕರಗ ಮಹೋತ್ಸವದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಡಾಬಾ ಶಂಕರ್, ಪಟೇಲ್ ಶ್ರೀನಿವಾಸ್, ವೆಂಕಟೇಶಪತಿ, ನಾರಾಯಣಸ್ವಾಮಿ, ಶ್ರೀನಿವಾಸ್, ಗೋವಿಂದಪ್ಪ, ಅಂಜಿನಪ್ಪ, ಸಂತೋಷ್, ಸತೀಶ್, ವೆಂಕಟರಾಜು, ದೇವರಾಜ್, ಸುಮನ್, ಆನಂದ್, ಅಕ್ಷಯ್, ರವಿ, ಯಲ್ಲಪ್ಪ, ಸಿದ್ದು, ಅಭಿ, ಮನೋಜ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-18-68878222

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.