ಕೋಲಾರ: ದಾರಿ ಕೇಳುವ ನೆಪದಲ್ಲಿ ಮಧ್ಯರಾತ್ರಿ ಸುಲಿಗೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ಯಳಗೊಂಡಹಳ್ಳಿ ಗ್ರಾಮದ ಸಿ.ಆದರ್ಶ (20) ಹಾಗೂ ಮಿಣಜೇನಹಳ್ಳಿ ಗ್ರಾಮದ ಹೇಮಂತ್ ಬಂಧಿತ ಆರೋಪಿಗಳು. ಇವರಿಂದ 23 ಗ್ರಾಂ ಚಿನ್ನದ ಸರ, ₹ 4,800 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರದ ಗಾಂಧಿನಗರದ ವಾಸಿ ಶಿವಶಂಕರ್ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ಕೋಲಾರದ ಕಡೆಗೆ ಹೊರಡಲು ಶ್ಯಾನುಭೋಗನಹಳ್ಳಿ ಗೇಟ್ ಬಳಿ ತೆರಳಿದ್ದಾರೆ. ಆಗ ಅಲ್ಲಿಗೆ ಬೈಕ್ನಲ್ಲಿ ಬಂದ ಇಬ್ಬರು ವಿಳಾಸ ಕೇಳಿದ್ದಾರೆ. ಶಿವಶಂಕರ್ ಬೈಕ್ ನಿಲ್ಲಿಸಿ ದಾರಿ ತೋರಿಸುತ್ತಿದ್ದಂತೆಯೇ ₹ 3 ಲಕ್ಷ ಮೌಲ್ಯದ 23 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.

ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಕನ್ನಿಕಾ ಸಿಕ್ರಿವಾಲ್, ಮಾರ್ಗದರ್ಶನದಲ್ಲಿ ಎಎಸ್ಪಿ ರವಿಶಂಕರ್, ಜಗದೀಶ್, ಡಿವೈಎಸ್ಪಿ ಕೃಷ್ಣಪ್ಪ ಮುಂದಾಳತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-18-1949981627

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.