ಶ್ರೀನಿವಾಸಪುರ: ತಾಲ್ಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಸ್.ನಾಗಾರ್ಜುನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಸಂಘದಲ್ಲಿ 10 ನಿರ್ದೇಶಕರಿದ್ದು, ಒಂದು ನಾಮಪತ್ರವನ್ನು ಮಾತ್ರ ಸಲ್ಲಿಕೆ ಆಯಿತು. ಹೀಗಾಗಿ, ನಾಗಾರ್ಜುನ ಅವಿರೋಧವಾಗಿ ಆಯ್ಕೆಯಾದರು.

ಸಂಘವನ್ನು ಪಕ್ಷಾತೀತವಾಗಿ ಮುನ್ನಡೆಸಲಾಗುವುದು. ಸಂಘದ ಅಭಿವೃದ್ಧಿ ಹಾಗೂ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು. ಸಂಘದ ಎಲ್ಲ ನಿರ್ದೇಶಕರೂ ಪೂರ್ಣ ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಚುನಾವಣಾಧಿಕಾರಿಯಾಗಿ ಮುಸ್ತಾಕ್ ಅಹ್ಮದ್, ಉಪ ಚುನಾವಣಾಧಿಕಾರಿಯಾಗಿ ವೀರಭದ್ರಪ್ಪ ಕಾರ್ಯನಿರ್ವಹಿಸಿದರು. ಸಂಘದ ಕಾರ್ಯದರ್ಶಿ ಟಿ.ವಿ.ನಾರಾಯಣಸ್ವಾಮಿ, ನಿರ್ದೇಶಕರಾದ ಟಿ.ವಿ.ಚಿನ್ನಪ್ಪರೆಡ್ಡಿ, ಟಿ.ಬಿ.ವೆಂಕಟರಾಮರೆಡ್ಡಿ, ಟಿ.ವಿ.ವೆಂಕಟರಾಮರೆಡ್ಡಿ, ಟಿ.ಜಿ.ಮಂಜುನಾಥರೆಡ್ಡಿ, ಕೆ.ವಿ.ಶ್ರೀನಿವಾಸರೆಡ್ಡಿ, ಟಿ.ವಿ.ರುಕ್ಮಣಿಯಮ್ಮ, ಮುನಿವೆಂಕಟಮ್ಮ ಹಾಗೂ ಗ್ರಾಮಸ್ಥರು ಇದ್ದರು.

ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚನೆ

ಕೋಲಾರ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿಶ್ರಾಂತಿ ನೀಡುವುದು ಗುತ್ತಿಗೆದಾರರು ಹಾಗೂ ಮಾಲೀಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಹಾಗೂ ಕಾರ್ಮಿಕರ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಕೆಲವು ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದ್ದಾರೆ.

ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಬೇಕು. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು, ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಕ್ಕಲೇರಿಯಲ್ಲಿ ಹೆರಿಗೆ ವಾರ್ಡ್ ನಿರ್ಮಾಣ

ಕೋಲಾರ: ತಾಲ್ಲೂಕಿನ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟಾಟಾ ಕಂಪನಿಯ ಸಿಎಸ್ಆರ್ ಯೋಜನೆಯಡಿಯಲ್ಲಿ ಸುಮಾರು ₹ 35 ಲಕ್ಷದಲ್ಲಿ ಮಾದರಿ ಹೆರಿಗೆ ವಾರ್ಡ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಶಾಸಕ ಕೊತ್ತೂರು ಮಂಜುನಾಥ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ಭೂಮಿಪೂಜೆ ನಡೆಯಿತು.

ಮುಖಂಡರಾದ ವಕ್ಕಲೇರಿ ಲೋಕೇಶ್, ಬೊಟ್ಟು ರಾಜಪ್ಪ, ಮನೋಹರ್ ಗೌಡ, ಪೀಸ್ ಮಂಜು, ನಾಗೇಂದ್ರ, ಓಬಣ್ಣ, ಆಸ್ಪತ್ರೆಯ ವೈದ್ಯರು ಸಿಬ್ಬಂದಿ, ಕಂಪನಿಯ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-18-610594596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.