ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ: ಟೊಮೆಟೊ ಧಾರಣೆ ಏರುಮುಖ

Published 18 ಜೂನ್ 2024, 14:21 IST
Last Updated 18 ಜೂನ್ 2024, 14:21 IST
ಅಕ್ಷರ ಗಾತ್ರ

ಕೋಲಾರ: ಈ ಬಾರಿ ಜಿಲ್ಲೆಯಲ್ಲಿ ಫಸಲು ಕಡಿಮೆಯಾದ ಕಾರಣ ದಿನದಿಂದ ದಿನಕ್ಕೆ ನಿಧಾನವಾಗಿ ಟೊಮೆಟೊಗೆ ಬೇಡಿಕೆ ಹೆಚ್ಚುತ್ತಲಿದ್ದು, ಧಾರಣೆ ಏರುಮುಖವಾಗಿದೆ. 

ಸ್ಥಳೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಟೊಮೆಟೊ ಕೆ.ಜಿಗೆ ₹60ರಿಂದ ₹80 ದರದಲ್ಲಿ ಮಾರಾಟವಾಗುತ್ತಿದೆ.

ಕೋಲಾರ ಎಪಿಎಂಸಿ ಮಾರುಕಟ್ಟೆ ಹರಾಜಿನಲ್ಲಿ ಉತ್ತಮ ಗುಣಮಟ್ಟದ 15 ಕೆ.ಜಿ. ತೂಕದ ಟೊಮೆಟೊ ಬಾಕ್ಸ್‌ ₹1,100ಕ್ಕೆ‌ ಮಾರಾಟವಾಗಿದೆ. ಸಗಟು ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊಗೆ ಸರಾಸರಿ ₹73 ದರ ಇದೆ. 

ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ ಟೊಮೆಟೊ ಆವಕ ಪ್ರಮಾಣ 9,129 ಕ್ವಿಂಟಲ್‌ (71 ಸಾವಿರ ಬಾಕ್ಸ್‌) ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT