ಕೆಜಿಎಫ್: ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಪೇಪರ್ ಉಪಯೋಗ ಕಡಿಮೆ ಮಾಡಲು ಇ–ಸೇವೆಯನ್ನು ಹೆಚ್ಚು ಬಳಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಸೇವೆಯನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಸಾರಿಗೆ ಆಯುಕ್ತ ( ಇ ಗವರ್ನನ್ಸ್) ಜ್ಞಾನೇಂದ್ರ ಹೇಳಿದರು.

ಬೆಮಲ್ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಶನಿವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಬ್ಬಂದಿ ಕೊರತೆ ನಿವಾರಿಸಲು ಇ ಸೇವೆಯನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಸೇವೆ ಪಡೆಯಬಹುದು. ಚಾಲನಾ ತರಬೇತಿಯಿಂದ ಹಿಡಿದು ಹಲವು ಸೇವೆಗಳನ್ನು ಈಗ ಇ–ಸೇವೆಯಲ್ಲಿ ಮಾಡುತ್ತಿದ್ದೇವೆ ಎಂದರು.

ಸಾರಿಗೆ ಇಲಾಖೆಯ ಕಟ್ಟಡ ಇರುವ ಜಾಗದಲ್ಲಿ ವಿದ್ಯುತ್ ಉಳಿತಾಯ ಯೋಜನೆ ರೂಪಿಸಲಾಗಿದೆ. ಅಲ್ಲಿ ವಿದ್ಯುತ್ ಪರ್ಯಾಯವಾಗಿ ಸೋಲಾರ್ ಶಕ್ತಿಯನ್ನು ಬಳಸಿಕೊಳ್ಳಬೇಕಾಗಿದೆ. ಕೆಜಿಎಫ್ ಕಟ್ಟಡದಲ್ಲಿ ಕೂಡ ಶೀಘ್ರದಲ್ಲಿಯೇ ಸೋಲಾರ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.

ಎಆರ್ಟಿಒ ಕಚೇರಿಯಲ್ಲಿ ಸ್ವಯಂಚಾಲಿತ ವಾಹನ ತರಬೇತಿ ಪರೀಕ್ಷಾರ್ಥ ಪಥ ಈಗ ಮ್ಯಾನುವೆಲ್ ಆಗಿ ನಡೆಯುತ್ತಿದೆ. ಸ್ವಯಂಚಾಲಿತ ವ್ಯವಸ್ಥೆಗೆ ಸೆನ್ಸಾರ್ ಅಳವಡಿಸಬೇಕಾಗಿದೆ. ಸೆನ್ಸಾರ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಅತಿ ಶೀಘ್ರದಲ್ಲಿಯೇ ಸೆನ್ಸಾರ್ ಅಳವಡಿಸಲಾಗುವುದು ಎಂದು ಹೇಳಿದರು.

ಗಜೇಂದ್ರ ಬಾಬು, ಇನ್ಸ್ಪೆಕ್ಟರ್ಗಳಾದ ಶ್ರೀನಿವಾಸ್, ಮುನಿಕೃಷ್ಣ, ಪೂಜಾ, ಸಿಬ್ಬಂದಿಗಳಾದ ಪ್ರಕಾಶ್, ಆನಂದಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-18-1641487727

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.