ವೇಮಗಲ್: ಹೋಬಳಿಯ ಮದ್ದೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 3ರ ವಿಶ್ವ ಸೈಕಲ್ ದಿನದ ಅಂಗವಾಗಿ ದೂರದ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಗ್ರಾಮಸ್ಥರ ನೆರವಿನಿಂದ ಉಚಿತವಾಗಿ ಸೈಕಲ್ ವಿತರಿಸಲಾಯಿತು.

ಈ ವೇಳೆ ಮದ್ದೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ಬಿ.ರೇವಣ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ನಿಟ್ಟಿನಲ್ಲಿ ಗ್ರಾಮದ ದಾನಿಗಳು ಉಚಿತವಾಗಿ ಸೈಕಲ್ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಸರ್ಕಾರದಿಂದ ಸಿಗುವ ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಗ್ರಾಮಸ್ಥರಾದ ಎಂ.ಆರ್.ಶ್ರೀನಿವಾಸ್ ಗೌಡ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಎಂ.ಆರ್.ರವಿಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಕೆ.ಶಿವರಾಜ್, ಸಹ ಶಿಕ್ಷಕ ಸುದರ್ಶನ್, ಮಲ್ಲಿಕಾರ್ಜುನ್ ಹಾಗೂ ಷಣ್ಮುಖಚಾರಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-18-1481151439

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.