ವೇಮಗಲ್: ಪಟ್ಟಣದ ರುದ್ರಭೂಮಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸತ್ಯ ಹರಿಶ್ಚಂದ್ರ ದೇವಾಲಯದ ಉದ್ಘಾಟನಾ ಕಾರ್ಯಕ್ರಮ ಈಚೆಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ಈ ವೇಳೆ ಎಂಎಲ್ಸಿ ಅನಿಲ್ ಕುಮಾರ್ ಮಾತನಾಡಿ, ರುದ್ರಭೂಮಿಯ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆ. ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯ ಪೂರೈಸುವ ನಿಟ್ಟಿನಲ್ಲಿ ಸ್ಮಶಾನದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಈ ಕುರಿತು ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದಿಂದ ಲಭ್ಯವಿರುವ ಅನುದಾನ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

ಸ್ಥಳದಲ್ಲೇ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಅವರು, ಕೂಡಲೇ ಸರ್ವೆ ಅಧಿಕಾರಿಗಳೊಂದಿಗೆ ಆಗಮಿಸಿ ಜಾಗದ ಅಳತೆ ಕಾರ್ಯ ಮುಗಿಸಿ, ಆವರಣಕ್ಕೆ ಕಾಂಪೌಂಡ್ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ಸ್ಮಶಾನ ಸಾರ್ವಜನಿಕ ಸ್ವತ್ತು. ಅದರ ಅಭಿವೃದ್ಧಿಯಲ್ಲಿ ಎಲ್ಲರ ಸಹಭಾಗಿತ್ವ ಮುಖ್ಯ. ಭವಿಷ್ಯದಲ್ಲಿ ಜಾಗದ ಕೊರತೆ ಎದುರಾಗುವುದನ್ನು ತಪ್ಪಿಸಲು ಈಗಿನಿಂದಲೇ ವಿದ್ಯುತ್ ಚಿತಾಗಾರಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾದ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ರುದ್ರಭೂಮಿಯಲ್ಲಿ ಕುಡಿವ ನೀರು, ವಿದ್ಯುತ್ ಸಂಪರ್ಕ, ರಸ್ತೆ ಹಾಗೂ ವಿಶ್ರಾಂತಿ ಸೆಡ್ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿದೆ. ಈ ಸೌಲಭ್ಯ ಒದಗಿಸಬೇಕೆಂದು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-162020126

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.