ವೇಮಗಲ್: ಹೋಬಳಿಯ ಸೀತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೇನಹಳ್ಳಿ ಗ್ರಾಮದಲ್ಲಿ ವೀರಚೊಕ್ಕಪ್ಪ ಸ್ವಾಮಿ ಮಹಾ ಕುಂಭಾಭಿಷೇಕ ಮಹೋತ್ಸವ ಅತ್ಯಂತ ವೈಭವದಿಂದ ನಡೆಯಿತು.

ಗ್ರಾಮದಲ್ಲಿ ನಿರ್ಮಾಣವಾಗಿದ್ದ ಮಿನಿ ಕಲ್ಯಾಣ ಮಂಟಪವನ್ನು ಉದ್ಘಾಟಿಸಲಾಯಿತು. ಜೊತೆಗೆ ಕುಂಭಾಭಿಷೇಕ ಅಂಗವಾಗಿ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಜೊತೆಗೆ ನೂರಾರು ಭಕ್ತರು ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.

ಭಾನುವಾರ ಸಾಯಂಕಾಲ ಗಣಪತಿ ಪೂಜೆಯೊಂದಿಗೆ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಸೋಮವಾರ ಮುಂಜಾನೆಯಿಂದಲೇ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಬೆಳಗ್ಗೆ 7 ಗಂಟೆಯಿಂದ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಮಂಗಳವಾದ್ಯಗಳ ಘೋಷದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಳಸ ಪ್ರದಕ್ಷಿಣೆ ನಡೆಸಿ, ದೇವಸ್ಥಾನದ ಗೋಪುರಕ್ಕೆ ಕುಂಭಾಭಿಷೇಕ ಮಾಡಲಾಯಿತು. ಬಲಿ ಪ್ರಧಾನ, ಗೋಪೂಜೆ ಮತ್ತು ಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ ನೆರವೇರಿತು.

ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-18-1107069261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.