ಕೋಲಾರ: ಮಹಾಶಿವರಾತ್ರಿ ಅಂಗವಾಗಿ ತಾಲ್ಲೂಕಿನ ವಕ್ಕಲೇರಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.

ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಪಾಲ್ಗೊಂಡರು. ವಿಶೇಷ ಪೂಜೆ ಸಲ್ಲಿಸಿ, ಭಕ್ತಾದಿಗಳಿಗೆ ಮಜ್ಜಿಗೆ ಹಾಗೂ ನೀರಿನ ವಾಟರ್ ಬಾಟಲ್ ವಿತರಣೆಗೆ ಚಾಲನೆ ನೀಡಿದರು.

ಕೊತ್ತೂರು ಮಂಜುನಾಥ್ ಮಾತನಾಡಿ, ‘ಪ್ರತಿ ವರ್ಷ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಇಲ್ಲಿಯ ಮಾರ್ಕಂಡೇಶ್ವರ ಬೆಟ್ಟದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ನಡೆಯುತ್ತಿದೆ. ದೇವಸ್ಥಾನಕ್ಕೆ ಬೆಳಿಗ್ಗೆಯಿಂದಲೇ ಜಿಲ್ಲೆಯಾದ್ಯಂತ ಭಕ್ತರು ಬಂದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಭಕ್ತರಿಗೆ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದರು.

ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ, ಈ ಬೆಟ್ಟವನ್ನು ಪ್ರವಾಸಿ ತಾಣಕ್ಕೆ ಸೇರ್ಪಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ದೇವಾಲಯ ಸಮಿತಿ ರಚಿಸಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾ.ಪಂ ಮಾಜಿ ಅಧ್ಯಕ್ಷ ಐ.ಲೋಕೇಶ್, ಮುಖಂಡರಾದ ಮುನಿವೆಂಕಟಪ್ಪ, ಟೈಲರ್ ಶಿವಕುಮಾರ್, ಕುಮಾರ್, ಚಿನ್ನಾಪುರ ನಾರಾಯಣಸ್ವಾಮಿ, ನದೀಂ, ವೀರೇಂದ್ರ ಪಾಟೀಲ್, ರಾಜಕುಮಾರ್, ಪೀಸ್ ಮಂಜು, ಅರುಣ್, ಆನಂದ್, ಶ್ರೀಧರ್, ಓಬಣ್ಣ, ಇನಾಯಿತ್, ಬೊಟ್ಟು ರಾಜಪ್ಪ, ಶಂಕರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.