ಕೋಲಾರ: ಜಿಲ್ಲೆಯ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ವಂಚಿತರಾಗಬಾರದು. ಅನರ್ಹ ಮತದಾರರು ಪಟ್ಟಿಯಲ್ಲಿ ಇರಬಾರದು ಎಂಬ ಉದೇಶದಿಂದ ಲೋಪದೋಷಗಳಿಲ್ಲದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)–2026ರ ಸಂಬಂಧ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಜೊತೆಗಿನ ಸಭೆಯ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅ.1 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ರಾಜ್ಯದಲ್ಲಿ ಪರಿಷ್ಕರಣೆ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 12,94,717 ಮತದಾರರಿದ್ದು, ಈವರೆಗೆ ಶೇ 91ರಷ್ಟು ಮತದಾರರನ್ನು ಮ್ಯಾಪಿಂಗ್ ಆಗಿದೆ. ಜೂನ್ 16ರೊಳಗೆ ಮ್ಯಾಪಿಂಗ್ ಪೂರ್ಣಗೊಳ್ಳಬೇಕು. ಜಿಲ್ಲೆಯಾದ್ಯಂತ ಈ ಬೃಹತ್ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಒಟ್ಟು 1,538 ಮತಗಟ್ಟೆ ಹಂತದ ಅಧಿಕಾರಿಗಳನ್ನು (ಬಿಎಲ್ಒ) ನಿಯೋಜಿಸಲಾಗಿದೆ ಎಂದರು.

ಮತಗಟ್ಟೆ ಹಂತದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಹಾಗೂ ಸಂಗ್ರಹಿಸುವ ಕಾರ್ಯವನ್ನು ಕೈಗೊಳ್ಳಲಿದ್ದು, ಈ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯಲಿದೆ. ಒಟ್ಟು 11 ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಕೊಡಬೇಕು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆಧಾರ್ ಅನ್ನು ಕೇವಲ ಗುರುತು ಸಾಬೀತುಪಡಿಸುವ ದಾಖಲೆಯಾಗಿ ಮಾತ್ರ ಪರಿಗಣಿಸಲಾಗುವುದು; ಇದು ಪೌರತ್ವ, ವಿಳಾಸ ಅಥವಾ ಜನ್ಮ ದಿನಾಂಕದ ಪ್ರಮಾಣವಲ್ಲ. ಮನೆಗೆ ಭೇಟಿ ನೀಡಿದಾಗ ವಿತರಿಸುವ ಇನ್ಯೂಮರೇಷನ್ (ಗಣತಿ ನಮೂನೆ) ಫಾರಂಗಳನ್ನು ಭರ್ತಿ ಮಾಡಿ ಯಾರು ಮರಳಿ ನೀಡುತ್ತಾರೋ, ಅಂಥವರ ಹೆಸರು ಮತದಾರರ ಪಟ್ಟಿಯಲ್ಲಿ ಮುಂದುವರಿಯಲಿವೆ. ಬಿಎಲ್ಒಗಳು ನೀಡುವ ಫಾರಂಗಳು ಈಗಾಗಲೇ ಭಾಗಶಃ ಭರ್ತಿಯಾಗಿರುತ್ತವೆ. ಮತದಾರರು ಅದರಲ್ಲಿರುವ ವಿವರಗಳನ್ನು ಪರಿಶೀಲಿಸಿ, ತಪ್ಪು ಗಳಿದ್ದರೆ ಸರಿಪಡಿಸಿ, ಸಹಿ ಮಾಡಿ ಬಿಎಲ್ಒಗೆ ನೀಡಬೇಕು ಎಂದರು.

ಬೀಗ ಹಾಕಿದ ಮನೆಗಳು ಅಥವಾ ಮೊದಲ ಭೇಟಿಯಲ್ಲಿ ಸಿಗದ ಮತದಾರರನ್ನು ತಲುಪಲು ಬಿಎಲ್ಒಗಳು ಕನಿಷ್ಠ ಮೂರು ಬಾರಿ ಭೇಟಿ ನೀಡಬೇಕು. ತಾವು ಭೇಟಿ ನೀಡಿದ ಕುರಿತು ಸೂಕ್ತ ದಾಖಲೆ, ಸಾಕ್ಷ್ಯವನ್ನು ಬಿಎಲ್ಒಗಳು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಜೂನ್ 20ರಿಂದ 29ರ ವರೆಗೆ ಬಿಎಲ್ಒಗಳಿಗೆ ತರಬೇತಿ ಕಾರ್ಯಕ್ರಮಗಳು ನಡೆಯಲಿವೆ. ಜೂನ್ 30ರಿಂದ ಜುಲೈ 29 ರವರೆಗೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮತಗಟ್ಟೆಗಳ ರಾಷನಲೈಸೇಷನ್ ಪ್ರಕ್ರಿಯೆಯು ಜುಲೈ 29ರಂದು ನಡೆಯಲಿದೆ. ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಂದಿನಿಂದ ಸೆ.4 ರವರೆಗೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಅ.3 ರೊಳಗೆ ವಿಲೇವಾರಿ ಮಾಡಲಾಗುವುದು. ಸಂಪೂರ್ಣ ಪ್ರಕ್ರಿಯೆ ಮುಗಿದ ಬಳಿಕ, ಅ.7 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳು ಪ್ರತಿಯೊಂದು ಮತಗಟ್ಟೆಗೂ ಬೂತ್ ಮಟ್ಟದ ಏಜೆಂಟರನ್ನು (ಬಿಎಲ್ಎ) ನೇಮಕ ಮಾಡುವಂತೆ ಕೋರಲಾಗಿದೆ. ಇವರು ಪರಿಷ್ಕರಣಾ ಪ್ರಕ್ರಿಯೆಯ ವೇಳೆ ಮತಗಟ್ಟೆ ವ್ಯಾಪ್ತಿಯಲ್ಲಿ ಹಾಜರಿದ್ದು, ಯಾವುದೇ ಲೋಪದೋಷಗಳಾಗದಂತೆ ಅಧಿಕಾರಿಗಳೊಂದಿಗೆ ಸಹಕರಿಸಬೇಕಾಗಿರುತ್ತದೆ ಎಂದರು.

ಮತದಾರರಿಗೆ ಸಹಾಯ ಮಾಡಲು ಹಾಗೂ ಗೊಂದಲಗಳನ್ನು ಪರಿಹರಿಸಲು ಸಂಬಂಧಪಟ್ಟ ಮತಗಟ್ಟೆಗಳಲ್ಲಿ 'ವೋಟರ್ ಫೆಸಿಲಿಟೇಷನ್ ಸೆಂಟರ್' ಸ್ಥಾಪಿಸಲಾಗುವುದು. ಇದರ ಮೇಲ್ವಿಚಾರಣೆಯನ್ನು ಬಿ.ಎಲ್.ಒ ಗಳು ಮಾಡಲಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿ ಯುವಜನರಲ್ಲಿ ಜಾಗೃತಿ ಮೂಡಿಸಲು 637 ಚುನಾವಣಾ ಸಾಕ್ಷರತಾ ಕ್ಲಬ್ಗಳು, 581 ಮತದಾರರ ಜಾಗೃತಿ ವೇದಿಕೆಗಳು ಹಾಗೂ 1538 ಚುನಾವ್ ಜಾಗೃತಿ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್ ಹಾಗೂ ನೋಡಲ್ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-18-413810113

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.