ಕೋಲಾರ: ನಗರ ಸ್ಥಳೀಯ ಸಂಸ್ಥೆಗಳ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಪ್ರಮುಖ ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕೋಲಾರ ಜಿಲ್ಲೆಯ ಪೌರಾಯುಕ್ತರು ಹಾಗೂ ಘನತ್ಯಾಜ್ಯ ನಿರ್ವಹಣಾ ತಜ್ಞರ ಕಾರ್ಯವೈಖರಿಗೆ ಜಿಲ್ಲಾಧಿಕಾರಿ ಎಂ.ಆರ್.ರವಿ ಶ್ಲಾಘಿಸಿದ್ದಾರೆ.

ರಾಜ್ಯ ಮಟ್ಟದ ಶ್ರೇಯಾಂಕ ಪಟ್ಟಿಯಲ್ಲಿ ಜಿಲ್ಲೆಯ ನಗರಸಭೆ ಪೌರಾಯುಕ್ತರು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ನಾಲ್ಕು ಮುಖ್ಯಾಧಿಕಾರಿಗಳು, ತಜ್ಞರು ಅತ್ಯುತ್ತಮ ಸಾಧನೆ ತೋರಿದ್ದಾರೆ.

ವೆಂಕಟೇಶ್ ನಾಗನೂರ್ (ಪೌರಾಯುಕ್ತರು, ಕೋಲಾರ ನಗರಸಭೆ)ರಾಜ್ಯ ಮಟ್ಟದಲ್ಲಿ 6ನೇ ಶ್ರೇಯಾಂಕ ಪಡೆದು ಸಾಧನೆ ಮಾಡಿದ್ದಾರೆ. ಮಹದೇವ ಎಂ.ಎಸ್. (ಪೌರಾಯುಕ್ತರು, ಮಾಲೂರು ನಗರಸಭೆ) 11ನೇ ಶ್ರೇಯಾಂಕ ಪಡೆದಿದ್ದಾರೆ. ಅಂಜನೇಯಲು ಜಿ.ಬಿ. (ಪೌರಾಯುಕ್ತರು, ಮುಳಬಾಗಿಲು ನಗರಸಭೆ) 16ನೇ ಶ್ರೇಯಾಂಕ ಪಡೆದಿದ್ದಾರೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ಹರ್ಷವರ್ಧನ್, ಘನತ್ಯಾಜ್ಯ ನಿರ್ವಹಣಾ ತಜ್ಞರ ವಿಭಾಗದಲ್ಲಿ 3ನೇ ಶ್ರೇಯಾಂಕ ಪಡೆದಿದ್ದಾರೆ.

ಎಂ.ಆರ್.ರವಿ ಮಾತನಾಡಿ, ‘ಸ್ವಚ್ಛತೆ ಮತ್ತು ವ್ಯವಸ್ಥಿತ ಘನತ್ಯಾಜ್ಯ ನಿರ್ವಹಣೆಯಲ್ಲಿ ಜಿಲ್ಲೆಯ ನಗರಸಭೆಗಳು ರಾಜ್ಯ ಮಟ್ಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಧಿಕಾರಿಗಳ ಮತ್ತು ತಜ್ಞರ ನಿರಂತರ ಪರಿಶ್ರಮ, ಯೋಜನಾಬದ್ಧ ಕಾರ್ಯವೈಖರಿಯಿಂದಾಗಿ ಈ ಸಾಧನೆ ಸಾಧ್ಯವಾಗಿದೆ. ಇದೇ ಉತ್ಸಾಹದೊಂದಿಗೆ ಮುಂದಿನ ದಿನಗಳಲ್ಲೂ ಜಿಲ್ಲೆಯನ್ನು ಸ್ವಚ್ಛ ಹಾಗೂ ಮಾದರಿ ಜಿಲ್ಲೆಯನ್ನಾಗಿ ರೂಪಿಸಲು ಶ್ರಮಿಸಬೇಕು’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-18-1512859558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.