ಕೋಲಾರ: ಜಿಲ್ಲೆಯಾದ್ಯಂತ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ಸುಮಾರು 132 ಗ್ರಾಮಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶಗಳಲ್ಲಿ ತುರ್ತಾಗಿ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.

ಜಿಲ್ಲಾಡಳಿತ ಭವನದ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ವಿಶೇಷ ಸಭೆ ಉದ್ದೇಶಿಸಿ ಮಾತನಾಡಿದ ಅವರು ಮುಂಗಾರು ಪೂರ್ವ ಸಿದ್ಧತೆ, ಕುಡಿಯುವ ನೀರಿನ ಸಮಸ್ಯೆ ಮತ್ತು ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೆಲಸ ಸಲಹೆ ಸೂಚನೆ ನೀಡಿದರು.

ಸಮಸ್ಯೆ ಇರುವ ಪ್ರದೇಶಗಳಲ್ಲಿ ನೀರಿನ ಮೂಲಗಳನ್ನು ಹೆಚ್ಚಿಸಲು 126 ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ. ಇವುಗಳನ್ನು ದುರಸ್ತಿ ಮಾಡುವ ಅಥವಾ ಹೊಸ ಕೊಳವೆ ಬಾವಿ ಅಳವಡಿಸುವ ಕಾರ್ಯವನ್ನು ತಕ್ಷಣವೇ ಪ್ರಾರಂಭಿಸಬೇಕೆಂದು ನಿರ್ದೇಶನ ನೀಡಿದರು.

ನೀರಿನ ಸಮಸ್ಯೆಯ ನಿವಾರಣೆಗೆ ಅಗತ್ಯವಿರುವ ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸುವುದು, ಆಡಳಿತಾತ್ಮಕ ಅನುಮೋದನೆ ಪಡೆಯುವುದು ಮತ್ತು ಕಾಮಗಾರಿಯನ್ನು ಪೂರ್ಣಗೊಳಿಸುವುದಕ್ಕಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ 15 ದಿನಗಳ ಗಡುವು ವಿಧಿಸಿದರು.

ಜಿಲ್ಲೆಯಲ್ಲಿನ ಪ್ರಸ್ತುತ ಮಳೆ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಲಭ್ಯತೆಯ ಕುರಿತು ಮಾಹಿತಿ ಪಡೆದರು.

ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆಯನ್ನು ಸಮರ್ಪಕವಾಗಿ ಮೇಲ್ವಿಚಾರಣೆ ಮಾಡಬೇಕು ಮತ್ತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಸಾರ್ವಜನಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವುದು ಜಿಲ್ಲಾಡಳಿತದ ಪ್ರಥಮ ಆದ್ಯತೆಯಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈಗಾಗಲೇ 'ಶಾಖ ತರಂಗ ಕ್ರಿಯಾ ಯೋಜನೆ-2026' ಸಿದ್ಧಪಡಿಸಿದ್ದು, ಬಿಸಿಗಾಳಿಯಿಂದ ಸಾರ್ವಜನಿಕರನ್ನು ರಕ್ಷಿಸಲು ಜಾಗೃತಿ ಮೂಡಿಸಲು ಕರಪತ್ರಗಳು ಮತ್ತು ಜಿಂಗಲ್ಸ್ ಮೂಲಕ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸದ್ಯಕ್ಕೆ ಸುಮಾರು 2,62,912 ಟನ್ಗಳಷ್ಟು ಮೇವು ಲಭ್ಯವಿದ್ದು, ಇದು ಮುಂದಿನ 22 ವಾರಗಳಿಗೆ ಸಾಕಾಗಲಿದೆ. ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ಪಂಚಾಯಿತಿ ವ್ಯಾಪ್ತಿಯ ನೀರಿನ ತೊಟ್ಟಿಗಳಿಗೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಬೆಸ್ಕಾಂ ಸೇರಿದಂತೆ ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ವಿಪತ್ತು ನಿರ್ವಹಣೆಯು ಕೇವಲ ಒಂದು ಇಲಾಖೆಗೆ ಸೀಮಿತವಲ್ಲ, ಎಲ್ಲರೂ ಜವಾಬ್ದಾರಿಯುತವಾಗಿ ಸ್ಪಂದಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಎಲ್ಲಾ ತಾಲ್ಲೂಕಿನ ತಹಶೀಲ್ದಾರ್ಗಳು, ಎಲ್ಲಾ ತಾಲ್ಲೂಕಿನ ಇಒ, ನಗರಸಭೆ ಮತ್ತು ಪುರಸಭೆಯ ಪೌರಾಯುಕ್ತರು, ಕೃಷಿ ಜಂಟಿ ನಿರ್ದೇಶಕ ಜಾವೇದಾ ಖಾನಮ್, ಯೋಜನಾ ನಿರ್ದೇಶಕರು ಅಂಬಿಕಾ, ತೋಟಗಾರಿಕಾ ಉಪನಿರ್ದೇಶಕ ಕುಮಾರಸ್ವಾಮಿ, ಬೆಸ್ಕಾಂ ಇಇ ಶುಭಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಶ್ರೀನಿವಾಸನ್ ಹಾಗೂ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-18-1117384566

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.