ಕೋಲಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಸಂದರ್ಭದಲ್ಲಿ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸದ ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಎಂ.ಆರ್.ರವಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ನಡೆದ ಟಾಸ್ಕ್ ಫೋರ್ಸ್ ಮತ್ತು ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳ ಕಾರ್ಯವೈಖರಿ ಪರಾಮರ್ಶಿಸಿ ಕುಡಿಯುವ ನೀರಿನ ಪೂರೈಕೆ ಮತ್ತು ಮೂಲಸೌಕರ್ಯಗಳ ನಿರ್ವಹಣೆಯಲ್ಲಿನ ವಿಳಂಬ ಗಮನಿಸಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಾದ್ಯಂತ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ (ಆರ್ಒ) ಬಗ್ಗೆ ಚರ್ಚಿಸಿ, ಶ್ರೀನಿವಾಸಪುರದಲ್ಲಿ ಒಟ್ಟು 144 ಘಟಕಗಳ ಪೈಕಿ ಕೇವಲ 19 ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದ 125 ಘಟಕಗಳ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.

ಬಂಗಾರಪೇಟೆಯಲ್ಲಿ ₹ 21 ಲಕ್ಷ ವೆಚ್ಚದಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿದ್ದು, ಬಾಕಿ ಇರುವ ಘಟಕಗಳನ್ನು ಕೂಡಲೇ ಸರಿಪಡಿಸಲು ಸೂಚನೆ ನೀಡಿದರು.

ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವುದರಿಂದ ಖಾಸಗಿ ಟ್ಯಾಂಕರ್ಗಳ ಮೂಲಕ ನೀರು ಪೂರೈಸುವ ಅನಿವಾರ್ಯ ಎದುರಾಗಬಹುದು. ಈ ನಿಟ್ಟಿನಲ್ಲಿ ಟ್ಯಾಂಕರ್ ಮಾಲೀಕರು ಸಾರ್ವಜನಿಕರನ್ನು ಸುಲಿಗೆ ಮಾಡದಂತೆ ತಡೆಯಲು, ಜಿಲ್ಲೆಯಾದ್ಯಂತ ಏಕರೂಪದ ದರ ನಿಗದಿಪಡಿಸಲು ತಹಶೀಲ್ದಾರ್ಗಳು ಕ್ರಮ ವಹಿಸಬೇಕು. ಪ್ರತಿ 5,000 ಲೀಟರ್ ನೀರಿಗೆ ವೈಜ್ಞಾನಿಕವಾಗಿ ದರ ನಿಗದಿಪಡಿಸಿ ವರದಿ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಇಒಗಳು ಮತ್ತು ನಗರಸಭೆಗಳ ಆಯುಕ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-18-1968563989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.