ಕೋಲಾರ: ನಗರ ಹೊರವಲಯದ ಅರಹಳ್ಳಿ ಗ್ರಾಮದ ಬಳಿ ಕೆರೆಗೆ ಬಿದ್ದಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾಗಿದ್ದಾರೆ.

ಕೋಲಾರದ ನಿಸಾರ್ ನಗರದ ನಿಸಾರ್ ಮೊಹಮದಿ (25) ಹಾಗೂ ಸಲ್ಮಾ (26) ನೀರಿನಲ್ಲಿ ಮುಳುಗಿ ಮೃತರಾದ ಮಹಿಳೆಯರು. ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಕ್ಕಳನ್ನು ಕರೆದುಕೊಂಡು ಈ ಇಬ್ಬರು ಮಹಿಳೆಯರು ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮಕ್ಕಳು ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಅವರ ರಕ್ಷಣೆಗೆ ಈ ಇಬ್ಬರು ಮಹಿಳೆಯರು ಧಾವಿಸಿದ್ದಾರೆ. ಆಗ ಈ ದುರಂತ ಸಂಭವಿಸಿದೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-18-1648795407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.