ಕೋಲಾರ: ‘ಕಾಂಗ್ರೆಸ್ನವರು ಮಹಿಳಾ ವಿರೋಧಿಗಳು. ಹೆಣ್ಣು ಮಕ್ಕಳು ರಾಜಕೀಯಕ್ಕೆ ಬಾರದಂತೆ ತಡೆಯುತ್ತಿದ್ದಾರೆ. ಕೇವಲ ಒಂದು ಕುಟುಂಬದ ಮಹಿಳೆಯರು ಅಧಿಕಾರದಲ್ಲಿರಬೇಕೆಂಬ ದುರಾಸೆ ಅವರದ್ದು. ಮಹಿಳಾ ಮೀಸಲಾತಿಗೆ ಅಡ್ಡಗಾಲಾಗಿರುವ ಕಾಂಗ್ರೆಸ್ ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ದಶಕಗಳಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಮೂಲೆ ಗುಂಪು ಮಾಡಿದ್ದ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಬಿಜೆಪಿ ನೇತೃತ್ವದ ಎನ್ಎಡಿ ಸರ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದಾಗ ಸೋಲಿಸಿವೆ. ಈ ಕ್ರಮವನ್ನು ಬಿಜೆಪಿ ಮಹಿಳಾ ಘಟಕ ತೀವ್ರವಾಗಿ ಖಂಡಿಸುತ್ತದೆ’ ಎಂದರು.

ಕ್ಷೇತ್ರ ಮರು ವಿಂಗಡಣೆ ಮಸೂದೆ ಜಾರಿಗೆ ಮಹಿಳಾ ಮೀಸಲಾತಿಯನ್ನು ನೆಪ ಮಾಡಿಕೊಂಡಿದ್ದಾರೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಈ ಆರೋಪಗಳು ಸುಳ್ಳು. ಮಹಿಳೆಯರಿಗೆ ಶಕ್ತಿ ತುಂಬಲು ಕಾಂಗ್ರೆಸ್ ಪಕ್ಷದಲ್ಲಿ ಇಚ್ಛಾಶಕ್ತಿ ಕೊರತೆ ಇರುವುದು ಸ್ವಷ್ಟವಾಗಿದೆ. ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಈ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಎಲ್ಲಾ ಕ್ಷೇತ್ರಗಳ ಮಹಿಳೆಯರನ್ನು ಒಳಗೊಂಡು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಮೋದಿ ದಿಟ್ಟ ನಿರ್ಧಾರಗಳೊಂದಿಗೆ ನಾರಿಶಕ್ತಿಗೆ ನ್ಯಾಯ ದೊರಕಿಸುವ ದಿಸೆಯಲ್ಲಿ ಶೇ 33 ರಷ್ಟು ಮಹಿಳಾ ಮೀಸಲಾತಿಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದ್ದರು. ದೇಶದ ಮಹಿಳೆಯರು ಖುಷಿಯಲ್ಲಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕೂಡ ಬೆಂಬಲಿಸಲಿದೆ ಎಂಬ ನಿರೀಕ್ಷೆ ಇತ್ತು. ನಮ್ಮ ನಿರೀಕ್ಷೆ ಹುಸಿಯಾಗಿದೆ. ಕಾಂಗ್ರೆಸ್ನ ಮಹಿಳಾ ವಿರೋಧಿ ನೀತಿಗೆ ಇದು ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಭಾರತದಲ್ಲಿ ಅನೇಕ ಮಹಾರಾಣಿಯರು ಆಳ್ವಿಕೆ ನಡೆಸುವ ಮೂಲಕ ನಾರಿ ಶಕ್ತಿಯನ್ನು ಪ್ರದರ್ಶಿಸಿ ಇತಿಹಾಸ ದಾಖಲಿಸಿದ್ದಾರೆ. ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮಿ ಬಾಯಿ ಸೇರಿದಂತೆ ಮುಂತಾದವರು ಆಡಳಿತ ನಡೆಸಿದ್ದಾರೆ. ಸಶಕ್ತ ಮಹಿಳೆಯರಿಗೆ ರಾಜಕೀಯವಾಗಿ ಮೀಸಲಾತಿ ನೀಡಲು ಕಾಂಗ್ರೆಸ್ ಪಕ್ಷ ವಿರೋಧ ತೋರುತ್ತಿರುವುದು ಖಂಡನೀಯ ಎಂದರು.

ಮಹಿಳೆಯರನ್ನು ಅಧಿಕಾರದಿಂದ ದೂರವಿಡಬೇಕು ಎಂಬುದು ಕಾಂಗ್ರೆಸ್ನ ಸಿದ್ಧಾಂತವಾಗಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ಏಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು? ಬಿಜೆಪಿ ಸರ್ಕಾರದಲ್ಲಿ ಈ ಹಿಂದಿನಿಂದಲೂ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಅನೇಕರಿಗೆ ಮಂತ್ರಿ ಸ್ಥಾನ ನೀಡಿ ಗೌರವಿಸಲಾಗಿದೆ. ಪುರುಷರಷ್ಟೇ ಸಮಾನವಾದ ಹಕ್ಕು ನೀಡಲಾಗಿದೆ. ಅವರಿಗಾಗಿ ವಿಶೇಷವಾದ ಯೋಜನೆಗಳನ್ನು ತಂದು ಸಮಾಜಮುಖಿಯಾಗಿ, ಸ್ವಾವಲಂಬಿಗಳನ್ನಾಗಿ ಮಾಡಲಾಗಿದೆ ಎಂದು ವಿವರಿಸಿದರು.

ಲೋಕಸಭೆಯಲ್ಲಿ ಒಟ್ಟು 74 ಮಹಿಳೆಯರ ಪೈಕಿ 30 ಮಹಿಳೆಯರು ಮಸೂದೆಯ ವಿರುದ್ಧ ಮತ ಚಲಾಯಿಸಿರುವುದು ಅಘಾತಕಾರಿ ಸಂಗತಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷೆ ಅರುಣಮ್ಮ, ಪದಾಧಿಕಾರಿಗಳಾದ ಮಮತಾ, ಪದ್ಮಾವತಿ, ಸವಿತಾ, ಅನಿತಾ ನಾಗರಾಜ್, ಸುಮಾ ವಿಶ್ವನಾಥ್, ‘ಕುಡಾ’ ಮಾಜಿ ಅಧ್ಯಕ್ಷ ವಿಜಯಕುಮಾರ್ ಇದ್ದರು,

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-18-1000447522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.